ಶಿರೂರು: ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ 2025ನೇ ಸಾಲಿನ ಹಳೆ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ ಶಾಲೆಯ ಮೈದಾನದಲ್ಲಿ ನಡೆಯಿತು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿಹೊಸ್ಮನೆ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶಿರೂರು ಗ್ರಾ.ಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ, ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಕೃಷ್ಣ ಪೂಜಾರಿ,ವಿದ್ಯಾರ್ಥಿ ಸಂಘದ ಶಂಕರ ಎನ್ ಬಿಲ್ಲವ, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ದೇವಿ ಪೂಜಾರಿ, ರಘುವೀರ ಶೇಟ್,ದೇವಕಿ, ಬಿಲ್ಲವ,ಸುಧಾಕರ್,ಸಂತೋಷ್ ನಾಯಕ್, ಶ್ರೀಧರ್ ಚಂದನ್, ಆಸಿಯಾ ,ಆಶಾ ಮೇಸ್ತ, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು,ಸರ್ವ ಸದಸ್ಯರು,ಪಾಲಕ ಪ್ರತಿನಿಧಿಗಳು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕರಾದ ಶಂಕರ ಶಿರೂರು ಸ್ವಾಗತಿಸಿದರು.ಜೊತೆ ಕಾರ್ಯದರ್ಶಿ ಸಿ.ಎನ್. ಬಿಲ್ಲವ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಗೋವಿಂದ ಎಂ.ವಂದಿಸಿದರು. ಶಿಕ್ಷಕಿ ಜಯಶ್ರೀದಾಸ ಪೈ ಹಾಗೂ ಸುಬ್ರಹ್ಮಣ್ಯ ಕ್ರೀಡಾಕೂಟವನ್ನು ನಡೆಸಿಕೊಟ್ಟರು.