ಶಿರೂರು: ಕನ್ನಡ ಶಾಲೆಗಳ ಅಭಿವೃದ್ದಿಯಾಗಬೇಕಾದರೆ ಶಿಕ್ಷಕರ ಕ್ರಿಯಾಶೀಲತೆ,ಪಾಲಕರ ಆಸಕ್ತಿ ಮತ್ತು ಸಾರ್ವಜನಿಕರ ಪ್ರೋತ್ಸಾಹ ಅತ್ಯಗತ್ಯವಾಗಿದೆ.ಗ್ರಾಮೀಣ ಭಾಗದಲ್ಲಿ ನೈಜ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಪ್ರೋತ್ಸಾಹ ಮತ್ತು ಶೈಕ್ಷಣಿಕ ವಾತಾವರಣ ನೀಡಿದಾಗ ಯಶಸ್ಸು ಸಾದ್ಯ.ಬದಲಾವಣೆಗೆ ಹೊಂದಿಕೊಂಡು ಹೊಸತನ ಅಳವಡಿಸಿಕೊಂಡಾಗ ಶೈಕ್ಷಣಿಕ ಪ್ರಗತಿ ಸಾದ್ಯ ಎಂದು ಶಿರೂರು ಗ್ರಾ.ಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ ಹೇಳಿದರು ಅವರು ಪಿ.ಎಂ.ಶ್ರೀ  ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ 2025 ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಈ ಮಾತುಗಳನ್ನಾಡಿದರು.

ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಕೃಷ್ಣ ಪೂಜಾರಿ ಸಭಾಧ್ಯಕ್ಷತೆ ವಹಿಸಿದ್ದರು.ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ ಶಾಲಾ ಸಂಚಿಕೆಯನ್ನು ಬಿಡುಗಡೆಗೊಳಿಸಿದರು.

ಮುಖ್ಯ ಅತಿಥಿಗಳಾಗಿ ಗ್ರಾ.ಪಂ ಸದಸ್ಯರಾದ ಉದಯ ಪೂಜಾರಿ,ಪ್ರಸನ್ನ ಕುಮಾರ್ ಶೆಟ್ಟಿ,ಉಷಾ ಜನಾರ್ಧನ ಗಾಣಿಗ,ಪ್ರೇಮಾ ಮೊಗೇರ್, ಪದ್ಮಾವತಿ ಮೊಗೇರ್,ಸರಕಾರಿ ನೌಕರರ ಸಂಘದ ಅಧ್ಯಕ್ಷ ಶೇಖರ ಪೂಜಾರಿ,ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ ಹೊಸ್ಮನೆ,ಗಣಪ್ಪಯ್ಯ ಶೆಟ್ಟಿ ,ವಿದ್ಯಾರ್ಥಿ ನಾಯಕ ಭರತ್,ನಾಯಕಿ ಸಾಕ್ಷಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ಸಿ.ಎನ್.ಬಿಲ್ಲವ ಹಾಗೂ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತರಾದ ರವೀಂದ್ರ ಶೆಟ್ಟಿ ಹೊಸ್ಮನೆ ಯವರನ್ನು ಸಮ್ಮಾನಿಸಲಾಯಿತು.

ಚಿತ್ರಾಪುರ ಶಾಲೆಯ ದೈಹಿಕ ಶಿಕ್ಷಕ ವಾಸುದೇವ ಎಸ್.ಪೂಜಾರಿ ಸ್ವಸ್ತಿವಾಚನಗೈದರು.ಶಾಲಾ ಮುಖ್ಯ ಶಿಕ್ಷಕ ಶಂಕರ ಶಿರೂರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಶಿಕ್ಷಕ ಸಿ.ಎನ್.ಬಿಲ್ಲವ ಕಾರ್ಯಕ್ರಮ ನಿರೂಪಿಸಿದರು.ಗೋವಿಂದ ಟೀಚರ್ ವಂದಿಸಿದರು.

ವರದಿ/ಗಿರಿ ಶಿರೂರು

ಚಿತ್ರ: ಎ.ವನ್.ಸ್ಟುಡಿಯೋ ಶಿರೂರು

 

 

 

 

Leave a Reply

Your email address will not be published. Required fields are marked *

two × two =