ಬೈಂದೂರು,: ಮತದಾರರ ಪಟ್ಟಿಯಲ್ಲಿನ ಗೊಂದಲದ ಬಗ್ಗೆ ಸರ್ಕಾರದ ಪಾತ್ರವಿದೆ ಎಂದು ಅಪಪ್ರಚಾರ ಮಾಡುತ್ತಿರುವ ವಿರೋಧ ಪಕ್ಷಗಳ ಆರೋಪ ಸತ್ಯಕ್ಕೆ ದೂರವಾಗಿದೆ.ಮತದಾರರ ಪಟ್ಟಿ ಸಿದ್ಧಪಡಿಸುವುದು ಚುನಾವಣಾ ಆಯೋಗದ ಕೆಲಸ.ಒಟ್ಟು ಮತದಾರರು ಹಾಗೂ ಜನಗಣತಿಯ ಆಧಾರದ ಮೇಲೆ ಶೇ.75 ರಷ್ಟು ಅನುಪಾತ ಹೊಂದಿರಬೇಕೆನ್ನುವುದು ಆಯೋಗದ ನೀತಿ. ಆದರೆ ಈ ಬಾರಿ ಶೇ.78ರಷ್ಟು ಅನುಪಾತವಿರುವುದರಿಂದ ಶೇ.3ರಷ್ಟು ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಿದ್ದಾರೆ ಎಂದು ಬೈಂದೂರು  ಬಿಜೆಪಿ ಮಂಡಲದ ಅಧ್ಯಕ್ಷ ನೆಲ್ಯಾಡಿ ದೀಪಕ್ ಕುಮಾರ ಶೆಟ್ಟಿ ಹೇಳಿದರು ಅವರು ಇಲ್ಲಿನ ಬೈಂದೂರು ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಉಡುಪಿ ಜಿಲ್ಲೆಯಲ್ಲಿ 30 ಸಾವಿರ ಸೇರಿದಂತೆ ಬೈಂದೂರು ಕ್ಷೇತ್ರದಲ್ಲಿ ಸುಮಾರು 6 ಸಾವಿರದಷ್ಟು ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ.ಇದರಲ್ಲಿ ಸರ್ಕಾರದ ಅಥವಾ ಬಿಜೆಪಿ ಪಕ್ಷದ ಯಾವುದೇ ಪಾತ್ರವಿಲ್ಲ ಆದರೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಸೇರ್ಪಡೆಗೆ ಒತ್ತು ಚುನಾವಣ ಆಯೋಗವು ನ.8 ರಿಂದ ಡಿ.8 ರವರೆಗೆ ಮತದಾರರ ಸೇರ್ಪಡೆ ಹಾಗೂ ತೆಗೆದು ಹಾಕಲು ಅವಕಾಶ ಕಲ್ಪಿಸುವುದರಿಂದ ನಾಳೆಯಿಂದ ಬೂತ್ ಮಟ್ಟದಿಂದಲೇ ಅರ್ಹರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಕ್ರಮಕೈಗೊಳ್ಳಲಾಗುತ್ತದೆ ಎಂದರು.

ಕಾರ್ಯಕರ್ತರ ಅಭಿಪ್ರಾಯ: ಬಿಜೆಪಿ ಪಕ್ಷದಲ್ಲಿ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎನ್ನುವುದರ ಬಗ್ಗೆ ಕಾರ್ಯಕರ್ತರ ಅಭಿಪ್ರಾಯಪಡೆಯಲಾಗುತ್ತದೆ. ಪ್ರಸ್ತುತ ಬಿ. ಎಂ. ಸುಕುಮಾರ ಶೆಟ್ಟಿ ಶಾಸಕರಾಗಿದ್ದಾರೆ. ಮುಂದಿನ ಚುನಾವಣೆಗೆ ಯಾರಿಗೆ ಟಿಕೆಟ್ ನೀಡಬೇಕು ಎನ್ನುವುದರ ಬಗ್ಗೆ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಪಡೆದು ಹೈಕಮಾಂಡ್ ಅಂತಿಮಗೊಳಿಸುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಕಾರ್ಯದರ್ಶಿ ಪ್ರಕಾಶ ಪೂಜಾರಿ ಜಡ್ಡು ಉಪಸ್ಥಿತರಿದ್ದರು.

 

 

 

Leave a Reply

Your email address will not be published.

3 × 5 =