ಬೈಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಡ ಬೈಂದೂರು ಇದರ 2026ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯಾನಂದ ಹೋಬಳಿದಾರ್ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿದರು.
ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ನಾಗರಾಜ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು.
ಉದ್ಯಮಿ ಬೆನೋಯಿ ಸಬಾಸ್ಟಿನ್,ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ ಭಂಡಾರ್ಕರ್,ಜಿ.ಪಂ ಮಾಜಿ ಸದಸ್ಯ ಸುರೇಶ ಬಟ್ವಾಡಿ,ಜನಾರ್ಧನ ಯು,ಜಯಾನಂದ ಬಿ.ಕೆ,ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಶೇಖರ ಪೂಜಾರಿ,ಮಾಜಿ ಎಸ್.ಡಿ.ಎಮ್.ಸಿ ಅಧ್ಯಕ್ಷ ಉಮೇಶ,ವಿಠಲ ಶೆಟ್ಟಿ ಸೂರ್ಕುಂದ,ಮಹಾಲಕ್ಷ್ಮೀ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕ್ರತ ಸಿ.ಎನ್. ಬಿಲ್ಲವ ಹಾಗೂ ಶಿವರಾಮ ಕಾರಂತ ಬಾಲ ಪ್ರತಿಭೆ ಪ್ರಶಸ್ತಿ ಪುರಸ್ಕ್ರತೆ ತ್ರಿಷಾ ರವರನ್ನು ಶಾಲೆಯ ವತಿಯಿಂದ ಸಮ್ಮಾನಿಸಲಾಯಿತು ಹಾಗೂ ಶಾಲೆಗೆ ಕೊಡುಗೆ ನೀಡಿದ ದಾನಿಗಳನ್ನು ಗೌರವಿಸಲಾಯಿತು.

ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ ಶುಭಶಂಸನೆಗೈದರು.ಭಾಸ್ಕರ ಎಸ್ ಸ್ವಸ್ತಿವಾಚನಗೈದರು.ಜಯಕುಮಾರಿ ವರದಿ ಮಂಡಿಸಿದರು.ಶಾಲಾ ಮುಖ್ಯ ಶಿಕ್ಷಕ ಗಿರೀಶ್ ಪಿ.ಮೇಸ್ತ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ನಾಗರತ್ನ ಮತ್ತು ಗೀತಾ ಕಾರ್ಯಕ್ರಮ ನಿರೂಪಿಸಿದರು.ರಾಘವೇಂದ್ರ ದೇವಾಡಿಗ ವಂದಿಸಿದರು.