ಬೈಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಲಿಮಕ್ಕಿ ಬಿಜೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಸಮಾರಂಭ ಜ.10 ರಂದು ಶಾಲಾ ಸಭಾಭವನಲ್ಲಿ ನಡೆಯಲಿದೆ.ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಕಾರ್ಯಕ್ರಮ ಉದ್ಘಾಟಿಸಲಿದ್ದು ಸ್ಮಾರ್ಟ್ ಕ್ಲಾಸ್ ಪ್ರಾಯೋಜಕರು ಹಾಗೂ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ ನೂತನ ಸ್ಮಾರ್ಟ್ ಕ್ಲಾಸ್‌ನ್ನು ಉದ್ಘಾಟಿಸಲಿದ್ದಾರೆ.ಸಭಾ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗವಹಿಸಲಿದ್ದು ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ನೃತ್ಯ ವೈವಿದ್ಯ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.