ಬೈಂದೂರು: ಕಳೆದ ವರ್ಷ ಬೈಂದೂರು ಉತ್ಸವ ಆಯೋಜಿಸಿ ಅಲ್ಲಿನ ಪ್ರವಾಸಿ ತಾಣ, ಆರಾಧನಾ ಕೇಂದ್ರಗಳನ್ನು ಪರಿಚಯಿಸಲಾಗಿತ್ತು, ಈ ಬಾರಿ ಆಡಳಿತ ವ್ಯವಸ್ಥೆ ಗ್ರಾಮದ ಬಳಿಗೆ ಬಂದು ನಾನಾ ಇಲಾಖೆಗಳ ಯೋಜನೆ ಹಾಗೂ ಸವಲತ್ತುಗಳ ಬಗ್ಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಕ್ಷೇತ್ರದ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಗ್ರಾಮೋತ್ಸವ ಎಂಬ ವಿನೂತನ ಪರಿಕಲ್ಪನೆಯನ್ನು ಜಾರಿಗೆ ತಂದು ಆಡಳಿತವನ್ನು ಗ್ರಾಮಮಟ್ಟಕ್ಕೆ ತರುವ ಪ್ರಯತ್ನ ಮಾಡಲಾಗಿದೆ. ನಾಗರಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಇಲಾಖೆಗಳು ಕೂಡ ಉತ್ತಮ ರೀತಿಯಲ್ಲಿ ಸಹಕಾರ ನೀಡಿದ್ದಾರೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಬೈಂದೂರು ತಾಲೂಕು ಆಡಳಿತ ಸೌಧದಲ್ಲಿ ಮಂಗಳವಾರ ಬೈಂದೂರು ಉತ್ಸವದ ಪ್ರಯುಕ್ತ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಬೈಂದೂರು ಉತ್ಸವ ಆಯೋಜನೆ ಕೇವಲ ಮನರಂಜನೆಗಾಗಿ ಅಲ್ಲ. ಮಹಿಳೆಯರನ್ನು ಮುಖ್ಯವಾಹಿನಿಗೆ ತರುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಬೇಂಕೆAಬ ಹಾಗೂ ಮಹಿಳೆಯರು ಸ್ವ-ಉದ್ಯಮದ ಮೂಲಕ ಆರ್ಥಿಕ ಸಬಲರಾಗಿ ಸ್ವಾವಲಂಬಿ ಜೀವನ ನಡೆಸುವಂತಾಗಬೇಕೇAಬ ಉದ್ದೇಶದಿಂದ ಅದಕ್ಕೆ ಪೂರಕವಾಗಿ ಉತ್ಸವ ಆಯೋಜಿಸಲಾಗಿದೆ ಹೊರತು ಕೇವಲ ಮನರಂಜನೆಗಾಗಿ ಅಲ್ಲ. ಸರ್ಕಾರ ಸಂಜೀವಿನಿ ಯೋಜನೆ ಜಾರಿಗೆ ತಂದಿದ್ದು, ಅದರ ಬಗ್ಗೆ ಮಹಿಳೆಯರಿಗೆ ಮಾಹಿತಿ ನೀಡಿ, ಅವರು ತೊಡಗಿಸಿಕೊಳ್ಳಲು ಅನುವಾಗುವಂತೆ ಕಾರ್ಯಕ್ರಮಗಳನ್ನು ಉತ್ಸವದಲ್ಲಿ ರೂಪಿಸಲಾಗುತ್ತಿದೆ. ಅಲ್ಲದೇ ಕೃಷಿ, ತೋಟಗಾರಿಕೆ, ಆರಣ್ಯ, ಪಶು ಸಂಗೋಪನೆ, ಶಿಕ್ಷಣ, ಬ್ಯಾಂಕಿAಗ್ ಮೊದಲಾದವುಗಳ ಬಗ್ಗೆ ಮಾಹಿತಿ ನೀಡಿ, ಇಲಾಖೆಗಳಲ್ಲಿರುವ ನಾನಾ ಸವಲತ್ತುಗಳ ಬಗ್ಗೆ ಜನರಿಗೆ ತಲುಪಿಸುವ ಕಾರ್ಯಕ್ರಮ ಸಂಘಟಿಸಲಾಗುತ್ತಿದೆ ಎಂದರು.
ಸುಮಾರು ೨೫ಕ್ಕೂ ಹೆಚ್ಚು ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ತಾಲೂಕಿನ ಮೀನುಗಾರರ ಸಹಕಾರಿ ಸಂಘಗಳ ಅಧ್ಯಕ್ಷರು, ಸಂಗ-ಸAಸ್ಥೆಗಳ ಪ್ರಮುಖರು ತಮ್ಮ ತಮ್ಮ ಸಲಹೆ, ಸೂಚನೆ ನೀಡಿದರು. ಬೈಂದೂರು ತಹಶೀಲ್ದಾರ್ ರಾಮಚಂದ್ರಪ್ಪ, ಕುಂದಾಪುರ ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್, ಕುಂದಾಪುರ ತಾಪಂ ಇಒ ಮಹೇಶ ಕೆ. ಜಿ., ಬೈಂದೂರು ತಾಪಂ ಇಒ ರಾಮದಾಸ್, ಮೀನುಗಾರಿಕಾ ಇಲಾಖೆಯ ಜಿಲ್ಲಾ ನಿರ್ದೇಶಕ ಕುಮಾರಸ್ವಾಮಿ, ಉತ್ಸವದ ಸಂಚಾಲಕ ಶ್ರೀಗಣೆಶ ಗಾಣಿಗ ಉಪ್ಪುಂದ ಉಪಸ್ಥಿತರಿದ್ದರು. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್‌ಕಾರ್ ಕಾರ್ಯಕ್ರಮ ನಿರ್ವಹಿಸಿದರು.