ಬೈಂದೂರು: ರೋಟರಿ ಕ್ಲಬ್ ಬೈಂದೂರು ಇದರ ವತಿಯಿಂದ ಕುಟುಂಬ ಸಮ್ಮಿಲನ ಕಾರ್ಯಕ್ರಮ ಶಿರೂರು ಕರಾವಳಿ ಕಡಲ ತಡೆಯಲ್ಲಿ ನಡೆಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ರೊ.ಡಾ ಉಮೇಶ್ ಪುತ್ರನ್ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ರೋಟರಿ ಸಂಸ್ಥೆ ಮಹತ್ವದ ಕೊಡುಗೆ ನೀಡಿದೆ.ರೋಟರಿ ಸದಸ್ಯತ್ವ ಪಡೆಯುವುದು ಪ್ರತಿಯೊಬ್ಬರ ಹೆಮ್ಮೆ. ಒಬ್ಬ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕ್ರಿಯಾಶೀಲತೆ, ವ್ಯಕ್ತಿತ್ವ ವಿಕಸನ ಮತ್ತು ವ್ಯವಹಾರ ವೃದ್ದಿಗೆ ರೋಟರಿ ಸಂಸ್ಥೆ ಸಹಕಾರಿಯಾಗಿದೆ.ಸಾಮಾಜಿಕ ಸೇವೆಯ ಜೊತೆಗೆ ಸಾಮಾಜಿಕ ಕಳಕಳಿಯ ಕಾರ್ಯಕ್ಕೆ ರೋಟರಿ ಸಂಸ್ಥೆಯಲ್ಲಿ ಅತೀ ಹೆಚ್ಚು ಅವಕಾಶಗಳಿದೆ ಎಂದರು.

ಬೈಂದೂರು  ರೋಟರಿ ಕ್ಲಬ್ ಅಧ್ಯಕ್ಷ ರೋ ಸುಬ್ರಹ್ಮಣ್ಯ ಜಿ. ಉಪ್ಪುಂದ ಸಭಾಧ್ಯಕ್ಷತೆ ವಹಿಸಿದ್ದರು.

ರೋಟರಿ ಟ್ರಸ್ಟ್ ಅಧ್ಯಕ್ಷ ಬಾಬು ಶೆಟ್ಟಿ, ಸಹಾಯಕ ಗವರ್ನರ್ ಐ ನಾರಾಯಣ್, ಜೋನಲ್ ಟ್ರೈನರ್ ಜೆಪಿ ಶೆಟ್ಟಿ, ಝೋನಲ್ ಲೆಫ್ಟಿನೆಂಟ್ ಪ್ರಸಾದ್ ಪ್ರಭು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸತತ ಮೂರನೇ ವರ್ಷ ಡಿಸ್ಟಿಕ್ ಕಲ್ಚರಲ್ ಚಾಂಪಿಯನ್ ,ರೋಟರಿ ಅಧ್ಯಕ್ಷರನ್ನು ಹಾಗೂ ಕಾರ್ಯದರ್ಶಿಗಳನ್ನು ಸಮ್ಮಾನಿಸಲಾಯಿತು. ಪ್ರಾಯೋಜಕರಾದ ಲಕ್ಷ್ಮಿ ಪ್ರಕಾಶ್ ಹಾಗೂ ದೀಪಿಕಾ ದಂಪತಿಗಳನ್ನು ಕ್ಲಬ್‌ನ ವತಿಯಿಂದ ಸನ್ಮಾನಿಸಲಾಯಿತು . 2026- 27ನೇ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾದ ಅರುಣ್ ಕುಮಾರ್ ಶಿರೂರು ಹಾಗೂ 2027 -28 ನೇ ಸಾಲಿನ ಅಧ್ಯಕ್ಷರಾಗಿ ಸತೀಶ್ ಶೆಟ್ಟಿ ಸೂಕುಂದ ಆಯ್ಕೆಯಾದರು.

ರೋಟರಿ ಸಂಸ್ಥೆಯ ಉದಯ್ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ವಂದಿಸಿದರು.

PHOTO/ SURESH MAKODI

 

Leave a Reply

Your email address will not be published. Required fields are marked *

18 + 6 =