ಬೈಂದೂರು; ಕಲೆ,ಸಾಂಸ್ಕ್ರತಿಕ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಬೈಂದೂರು ಬಹಳ ಹಿಂದಿನಿಂದಲೂ ಪ್ರಸಿದ್ದಿ ಪಡೆದಿದೆ.ಹತ್ತಾರು ಪೌರಾಣಿಕ ಹಿನ್ನೆಲೆಯುಳ್ಳ ಧಾರ್ಮಿಕ ಸ್ಥಳಗಳು ಬೈಂದೂರಿನಲ್ಲಿದೆ.ಶ್ರೀ ಕ್ಷೇತ್ರದ ವತಿಯಿಂದ ಇವುಗಳ ಅಭಿವೃದ್ದಿಗೆ ನಿರಂತರ ಸಹಾಯ ನೀಡಲಾಗಿದೆ.ಪ್ರತಿಯೊಬ್ಬರು ಧರ್ಮದ ಹಾದಿಯಲ್ಲಿ ಬದುಕು ಸಾಗಿಸಿ ಧಾರ್ಮಿಕತೆಯನ್ನು ಉಳಿಸಿಕೊಳ್ಳಬೇಕು.ಉತ್ಸವಗಳು ಬದುಕಿನ ಬದಲಾವಣೆಗೆ ನಾಂದಿಯಾಗಲಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಡೆ ಹೇಳಿದರು ಅವರು ಶನಿವಾರ ಬೈಂದೂರಿನ ಶಾಸಕರಾದ ಗುರುರಾಜ ಗಂಟಿಹೊಳೆ ಅವರ ಪರಿಕಲ್ಪನೆಯ ವತಿಯಿಂದ ಬೈಂದೂರಿನಲ್ಲಿ ನಡೆಯುತ್ತಿರುವ ಮೂರು ದಿನಗಳ ಕಾಲ ನಡೆಯಲಿರುವ ಬೈಂದೂರು ಉತ್ಸವ -2026 ಉದ್ಘಾಟಿಸಿ ಈ ಮಾತುಗಳನ್ನಾಡಿದರು.
ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ಹಿಂಗಾರ ಅರಳಿಸಿ ಮಾತನಾಡಿ ರಾಜ್ಯದಲ್ಲಿ ಅತ್ಯಂತ ವಿಭಿನ್ನ ಪರಿಕಲ್ಪನೆಯ ಮೂಲಕ ಕಾರ್ಯಕ್ರಮ ಸಂಯೋಜಿಸಿ ಸರಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ನೇರ ತಲುಪಿಸುವ ಕಾರ್ಯ ಬೈಂದೂರು ಉತ್ಸವದ ಮೂಲಕ ಆಗಿದೆ.ಈ ಪರಿಕಲ್ಪನೆಯಲ್ಲಿ ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಯವರ ಪರಿಶ್ರಮ ಮಾದರಿಯಾಗಿದೆ ಎಂದರು.
ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿ ದಕ್ಷಿಣ ಭಾರತದ ಪ್ರಸಿದ್ದ ತೀರ್ಥ ಕ್ಷೇತ್ರವಾದ ಕೊಲ್ಲೂರು ಉಪನಗರವಾಗಿ ಬೈಂದೂರು ಬೆಳೆಯಬೇಕಿದೆ.ಪ್ರತಿ ಗ್ರಾಮಗಳಲ್ಲಿ ಗ್ರಾಮೋತ್ಸವ ಪರಿಕಲ್ಪನೆಯ ಮೂಲಕ ಕಾರ್ಯಕ್ರಮ ಸಂಘಟಿಸಿ ಬೈಂದೂರು ಉತ್ಸವದಲ್ಲಿ ಸರಕಾರದ ಎಲ್ಲಾ ಯೋಜನೆಗಳನ್ನು ಒಗ್ಗೂಡಿಸಿದ ಕಲ್ಪನೆ ಅತ್ಯುತ್ತಮವಾಗಿದೆ.ಬೈಂದೂರು ಉತ್ಸವದಂತೆ ಈ ಉತ್ಸವ ಪ್ರತಿ ತಾಲೂಕಿನಲ್ಲೂ ಆಯೋಜಿಸುವಂತಾಗಲಿ ಎಂದರು.




ಮುಖ್ಯ ಅತಿಥಿಗಳಾಗಿ ಕುಂದಾಪುರ ಶಾಸಕ ಕಿರಣ ಕೊಡ್ಗಿ, ಕೊಲ್ಲೂರು ದೇವಳದ ಪ್ರಧಾನ ಅರ್ಚಕರಾದ ಕೆ.ರಾಮಚಂದ್ರ ಅಡಿಗ, ಕೆ.ಎನ್ ಶ್ರೀಧರ ಅಡಿಗ,ಕೆ.ಎನ್.ಸುಬ್ರಹ್ಮಣ್ಯ ಅಡಿಗ,ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷೆ ಅನಿತಾ ಆರ್.ಕೆ,ಅನೀಲ್ ಕುಮಾರ್ ಬಿ.ಸಿ ಟ್ರಸ್ಟ್ ಧರ್ಮಸ್ಥಳ,ಉದ್ಯಮಿ ವೆಂಕಟೇಶ ಕಿಣಿ ಬೈಂದೂರು ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಡೆ ಹಾಗೂ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಯವರನ್ನು ಬೈಂದೂರು ಉತ್ಸವದ ವತಿಯಿಂದ ಸಮ್ಮಾನಿಸಲಾಯಿತು.








ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಪ್ರಣುತ್ ಗಾಣಿಗ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ವರದಿ/ಗಿರಿ ಶಿರೂರು
ಚಿತ್ರ/ಮಹಾದೇವ ಗೊಂಡ ಕಡ್ಕೆ