ಬೈಂದೂರು: ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮದ್ದೋಡಿ ಶಾಲೆಗೆ ಸ್ಮಾರ್ಟ್ ಟಿವಿ ಮತ್ತು ಪ್ರಿಂಟರ್‌ನ್ನು ಕೊಡುಗೆಯಾಗಿ ನೀಡಲಾಯಿತು.
ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಟ್ರಸ್ಟಿ ಡಾ.ಗೋವಿಂದ ಬಾಬು ಪೂಜಾರಿ ಶಾಲಾ ಮುಖ್ಯ ಶಿಕ್ಷಕರಿಗೆ ಸ್ಮಾರ್ಟ್ ಟಿವಿ ಮತ್ತು ಪ್ರಿಂಟರ್ ಹಸ್ತಾಂತರಿಸಿ ಮಾತನಾಡಿದ ಅವರು ಯಾವುದೇ ಖಾಸಗಿ ಶಾಲೆಯ ವ್ಯವಸ್ಥೆಗೆ ಕಡಿಮೆ ಇಲ್ಲದಂತೆ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ಹಮ್ಮಿಕೊಂಡಿದ್ದು ಒಂದೊಂದಾಗಿ ಪೂರ್ಣಗೊಳಿಸಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಸರ್ಕಾರಿ ಶಾಲೆಗಳ ಪ್ರಾಮುಖ್ಯತೆ ಹೆಚ್ಚಿದ್ದು, ಶಾಲೆಯ ಉಳಿವಿಗೆ ಶಿಕ್ಷಣಾಭಿಮಾನಿಗಳು ಮತ್ತು ದಾನಿಗಳು ಸಹಕಾರ ನೀಡುವುದು ಅತ್ಯಗತ್ಯ ಎಂದರು.
ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷ ರಾಜು ಮರಾಠಿ,ಶಾಲಾ ಹಳೆ ವಿದ್ಯಾರ್ಥಿ ದಾನಿಗಳಾದ ಎಂ.ಡಿ ಜೈಸನ್,ಪಟ್ಟಣ ಪಂಚಾಯತ್ ನಾಮನಿರ್ದೇಶಕ ಸದಸ್ಯರಾದ ನಾಗರಾಜ ಶೆಟ್ಟಿ, ವರಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿ ಬಂದೂರು ಶಾಖೆಯ ವ್ಯವಸ್ಥಾಪಕ ನಾಗರಾಜ್ ಪಿ.ಯಡ್ತರೆ,ಹಿರಿಯರಾದ ಕೃಷ್ಣಪ್ಪ ಶೆಟ್ಟಿ ,ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗೇಂದ್ರ ಶೆಟ್ಟಿ,ಉಪಾಧ್ಯಕ್ಷ ಅಶ್ವಿತಾ ಶೆಟ್ಟಿ ,ಮಂಜಯ್ಯ ಶೆಟ್ಟಿ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯ ವಿಠಲ ದೇವಾಡಿಗ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ರಾಮಕೃಷ್ಣ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕಿ ನೀಲಾ ವಂದಿಸಿದರು.
ವರದಿ/ಗಿರಿ ಶಿರೂರು