ಬೈಂದೂರು: ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಒಕ್ಕೂಟ ಸರ್ಕಾರ ತಂದಿರುವ ಜನವಿರೋಧಿ ಮಸೂದೆಗಳಾದ ವಿದ್ಯುಚಕ್ತಿ ಖಾಸಗೀಕರಣ ಬೇಡ ಹಾಗೂ ವಿದ್ಯುತ್ ಇಲಾಖೆಯ ಖಾಸಗೀಕರಣ ವಿರೋಧಿಸಿ ಅಖಿಲ ಭಾರತ ವಿದ್ಯುತ್ ನೌಕರರ ಶಾಂತಿಯುತ ಮುಷ್ಕರ ಬೈಂದೂರು ಉಪವಿಭಾಗದ ಮೆಸ್ಕಾಂ ಕಚೇರಿಯಲ್ಲಿ ನಡೆಯಿತು.
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್ ಮಾತನಾಡಿ ವಿದ್ಯುತ್ ಇಲಾಖೆಯ ಖಾಸಗೀಕರಣ ವಿರೋಧಿಸಿ ದೇಶದ ರೈತರಿಗೆ, ಕೈಗಾರಿಕೋದ್ಯಮಕ್ಕೆ, ಗೃಹ ಉಪಯೋಗಿ ಬಳಕೆದಾರರಿಗೆ ಮತ್ತು ಕಾರ್ಮಿಕರಿಗೆ ಮಾರಕವಾಗಿದೆ.ಕೇಂದ್ರ ಸರಕಾರ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವುದು ಸರಿಯಲ್ಲ.ಇದು ಕಾರ್ಮಿಕ ವಿರೋಽ ನೀತಿಯಾಗಿದ್ದು ರೈತರು,ಜನಸಾಮಾನ್ಯರಿಗೆ ಹೊರೆಯಾಗಲಿದೆ.ವಿದ್ಯುತ್ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿರುವ ಸಾವಿರಾರು ನೌಕರರಿಗೆ ಇದರಿಂದ ಸಮಸ್ಯೆಯಾಗುತ್ತಿದ್ದು ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಶಿವಾನಂದ ನಾಯ್ಕ,ಸಂಜಯ ಕಿಣಿ,ಕೃಷ್ಣ ಮೊಗವೀರ,ವಿಜೇಂದ್ರ ಆಚಾರಿ,ವಿದ್ಯುತ್ ನೌಕರರ ಸಂಘದ ಅಧ್ಯಕ್ಷ ಕುಮಾರ್,ವಸಂತ ನಾಯ್ಕ ಹಾಗೂ ವಿದ್ಯುತ್ ನೌಕರರ ಸಂಘದ ಸದಸ್ಯರು ಹಾಜರಿದ್ದರು.