ಶಿರೂರು: ಪಿ.ಎಂ ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ ಪಿ.ಎಂ ಶ್ರೀ ಯೋಜನೆಯಡಿಯಲ್ಲಿ ನೂತನ ತರಗತಿ ಕೊಠಡಿಯ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿಜ್ಞಾನ ವಸ್ತು ಪ್ರದರ್ಶನ ಮತ್ತು ಮೆಟ್ರಿಕ್ ಮೇಳ ಉದ್ಘಾಟನೆ ಕಾರ್ಯಕ್ರಮ ಶಾಲಾ ಸಭಾಭವನದಲ್ಲಿ ನಡೆಯಿತು.
ಬೈಂದೂರು ಶಾಸಕ ಗುರುರಾಜ ಗಂಟೆಹೊಳೆ ಗುದ್ದಲಿ ಪೂಜೆ ನೆರವೇರಿಸಿ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು ಸರಕಾರಿ ಶಾಲೆಯೊಂದು ಈ ಮಟ್ಟದಲ್ಲಿ ಕಾಯ೯ಕ್ರಮ ಆಯೋಜಿಸಿದೆ ಎಂದಾದರೆ ಗುಣಾತ್ಮಕ ಶಿಕ್ಷಣ ದೊರೆಯುವುದರಲ್ಲಿ ಯಾವುದೇ ಸಂಶಯವಿಲ್ಲ .ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಹೆಚ್ಚಿನ ಒತ್ತು ನೀಡುವ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸುವುದಾಗಿ ತಿಳಿಸಿದರು.ಸರ್ಕಾರ ಶಿಕ್ಷಣಕ್ಕಾಗಿ ಕೋಟ್ಯಂತರ ರುಪಾಯಿ ಖರ್ಚು ಮಾಡುತ್ತಿದೆ ಇದನ್ನು ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಬಳಸಿಕೊಂಡು ವಿದ್ಯಾಭ್ಯಾಸದಲ್ಲಿ ತೊಡಗಬೇಕು.ಬಿಸಿಯೂಟ, ಪುಸ್ತಕ ವಿತರಣೆ ಸೇರಿದಂತೆ ನಾನಾ ಸೌಲಭ್ಯಗಳನ್ನು ಕಲ್ಪಿಸಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸುವ ಮೂಲಕ ಪ್ರತಿಯೊಬ್ಬರನ್ನೂ ಸುಶಿಕ್ಷಿತರನ್ನಾಗಿ ಮಾಡಬೇಕು ಎಂದರು.
ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಕೃಷ್ಣ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗರತ್ನ ಆಚಾರ್ಯ,ಗ್ರಾಮ ಪಂಚಾಯತ್ ಸದಸ್ಯರಾದ ಪ್ರಸನ್ನ ಕುಮಾರ್ ಶೆಟ್ಟಿ , ಉಷಾ ಜನಾರ್ಧನ್ ಗಾಣಿಗ,ಪ್ರೇಮ ಮೊಗವೀರ,ರವೀಂದ್ರ ಶೆಟ್ಟಿ ಆರ್‍ಮಕ್ಕಿ,ತಾ.ಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ ಹೊಸ್ಮನೆ ಮೊದಲಾದವರು ಉಪಸ್ಥಿತರಿದ್ದರು.
ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ಕೆ.ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಶಾಲಾ ಮುಖ್ಯ ಶಿಕ್ಷಕ ಶಂಕರ್ ಶಿರೂರು ಸ್ವಾಗತಿಸಿದರು.ಪ್ರ ಶಿಕ್ಷಕ ಸಿ.ಎನ್ ಬಿಲ್ಲವ ಕಾರ್ಯಕ್ರಮ ನಿರೂಪಿಸಿದರು. ಗೋವಿಂದ ಎಂ.ಹೊಸೂರು ವಂದಿಸಿದರು.

ಈ ಸಂದರ್ಭದಲ್ಲಿ ವಿಜ್ಞಾನ ವಕಿಂಗ್ ಮಾದರಿಗಳನ್ನು ಪ್ರದರ್ಶನ ಮಾಡಲಾಯಿತು ಹಾಗೂ ಐವತ್ತಕ್ಕೂ ಹೆಚ್ಚು ಮಾರಾಟ ಮಳಿಗೆಗಳನ್ನು ಮಾಡಿ ವಿದ್ಯಾರ್ಥಿಗಳಿಗೆ ವ್ಯವಹಾರಿಕವಾದಂತಹ ಜ್ಞಾನ ಸಂತೆ ಶಾಲೆಯೊಳಗೊಂದು ಸಂತೆ ಏರ್ಪಡಿಸಲಾತು.
ವರದಿ/ಗಿರಿ ಶಿರೂರು
pic/A.ONE STUDIO SHIRURU