ಬೈಂದೂರು: ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ ಉದ್ಯಮಿ ಯು.ಬಿ ಶೆಟ್ಟಿ ಇವರ ಸೇವಾರ್ಥವಾಗಿ ನೂತನ ಸ್ವಾಗತ ಮಹಾದ್ವಾರ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಗುರುವಾರ ರಾಯರ ಮಠದ ಆವರಣದಲ್ಲಿ ನಡೆಯಿತು.
ಬೆಳಿಗ್ಗೆ ರಾಯರ ಸನ್ನಿಧಿಯಲ್ಲಿ ರಾಘವೇಂದ್ರ ಸ್ವಾಮಿ ಮಠದ ಅರ್ಚಕರಾದ ಸುಬ್ರಾಯ ನಾವಡ ಹಾಗೂ ಮುರುಳಿ ನಾವಡ ಇವರ ನೇತ್ರತ್ವದಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳು ನಡೆಯಿತು. ಉದ್ಯಮಿ ಹಾಗೂ ಯು.ಬಿ.ಎಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಯು.ಬಿ ಶೆಟ್ಟಿ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು.

ಈ ಸಂದರ್ಭದಲ್ಲಿ ಟ್ರಸ್ಟ್‌ನ ಅಧ್ಯಕ್ಷರಾದ ಸೂಲಿಯಣ್ಣ ಶೆಟ್ಟಿ, ಉಪಾಧ್ಯಕ್ಷ ಎಸ್.ರಾಜು ಪೂಜಾರಿ,ಕಾರ್ಯದರ್ಶಿ ಮಂಜುನಾಥ ಶೆಟ್ಟಿ,ಸೇವಾ ಸಮಿತಿ ಸದಸ್ಯರು ಹಾಗೂ ಭಕ್ತಾಧಿಗಳು ಹಾಜರಿದ್ದರು.
ವರದಿ/ಗಿರಿ ಶಿರೂರು
ಚಿತ್ರ/ಉದಯ ಪಡಿಯಾರ್