ಬೈಂದೂರು: ಶ್ರಮದಿಂದ ಮಾತ್ರ ಸಾಧನೆ ಸಾಧ್ಯ ಎಂಬುದನ್ನು ಅರಿತರೆ ಗೆಲುವಿನ ದಾರಿ ಸುಲಭ .ಕಠಿಣ ಪರಿಶ್ರಮ ಹಾಗೂ ಪ್ರಯತ್ನ ಬದುಕಿನಲ್ಲಿ ಯಶಸ್ಸು ನೀಡುತ್ತದೆ.ರಂಗಭೂಮಿ ಪ್ರತಿ ಕಲಾವಿದನಿಗೂ ಧೈರ್ಯ ತುಂಬಿಕೊಡುತ್ತದೆ.ಬೈಂದೂರಿನಂತಹ ಗ್ರಾಮೀಣ ಪ್ರದೇಶದಲ್ಲಿ ಜರುಗುತ್ತಿರುವುದು ಮತ್ತು ಅದಕ್ಕೆ ತಕ್ಕಂತೆ ಪ್ರಜ್ಞಾವಂತ ಪ್ರೇಕ್ಷಕರೂ ಹುಟ್ಟಿಕೊಂಡಿರುವುದು ಈ ಎಲ್ಲದಕ್ಕೂ ಪೂರಕ ವಾತಾವರಣ ನಿರ್ಮಿಸಿದ ಸಂಸ್ಥೆಗಳ ಶ್ರಮ ದೊಡ್ಡದು. ಕಲೆ ಸಂಸ್ಕೃತಿಯನ್ನು ಜೀವಂತವಾಗಿರಿಸಿಕೊಳ್ಳುವುದು ಬಹುಮುಖ್ಯ.ಸುರಭಿ ತನ್ನ ಪರಿಪೂರ್ಣ ಸಾಧನೆಯ ಮೂಲಕ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದು ಕಳೆದ 26 ವರ್ಷಗಳಿಂದ ಇಂತಹ ಕಾರ್ಯಕ್ರಮಗಳ ಮೂಲಕ ಬೈಂದೂರಿಗೆ ಇನ್ನಷ್ಟು ಹಿರಿಮೆ ತಂದಿದೆ ಎಂದು ಉಪ್ಪುಂದ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ ಹೇಳಿದರು ಅವರು ಶನಿವಾರ ಸುರಭಿ (ರಿ.) ಬೈಂದೂರು  ಸಾಂಸ್ಕ್ರತಿಕ,ಸಾಹಿತ್ಯ,ಸೇವಾ ಪ್ರತಿಷ್ಠಾನ ಇದರ 26ನೇ ವರ್ಷದ ಅಂಗವಾಗಿ ದಿ.ಹೊಸಾಡು ಸುಬ್ರಾಯ ಶೇರುಗಾರ್ ಸಂಸ್ಮರಣಿಯ ಸಾಂಸ್ಕ್ರತಿಕೋತ್ಸವದ  ಪ್ರಯುಕ್ತ ಬೈಂದೂರು ಶಾರದಾ ವೇದಿಕೆಯಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿರುವ  ಸುರಭಿ ಜೈಸಿರಿ -2026 ಬಿಂದುಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟಿಸಿ ಈ ಮಾತುಗಳನ್ನಾಡಿದರು.

ಸುರಭಿ ಸಂಸ್ಥೆಯ ಅಧ್ಯಕ್ಷ ಆನಂದ ಮದ್ದೋಡಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಾಣಿಜ್ಯ ತೆರಿಗೆ ಇಲಾಖೆ ಮಂಗಳೂರು ಸಹಾಯಕ ಆಯುಕ್ತ ಸತೀಶ ಬಟ್ವಾಡಿ,ಭಟ್ಕಳ ದೃತಿ ಸರ್ಜಿಕಲ್ಸ್ ಮ್ಯಾನೆಜಿಂಗ್ ಡೈರಕ್ಟರ್ ಶರತ್ ಕುಮಾರ್ ಶೆಟ್ಟಿ ಉಪ್ಪುಂದ,ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಧನಾಕ್ಷಿ ವಿಶ್ವನಾಥ ಪೂಜಾರಿ,ಕ.ಸಾ.ಪ ಬೈಂದೂರು ತಾಲೂಕು ಅಧ್ಯಕ್ಷ ಅರುಣ ಕುಮಾರ್ ಶಿರೂರು,ರೋಟರಿ ಕ್ಲಬ್ ನಿಕಟಪೂರ್ವಾಧ್ಯಕ್ಷ ಮೋಹನ ರೇವಣ್ಕರ್,ಬೈಂದೂರು ಸೇನೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ದೊಟ್ಟಯ್ಯ ಪೂಜಾರಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಡಾ.ಶಿವರಾಮ ಕಾರಂತ ಬಾಲ ಪ್ರಶಸ್ತಿ ಪುರಸ್ಕ್ರತೆ ಕು.ಕೃತಿಕಾ ಕೃಷ್ಣ ಗಾಣಿಗ ರವರನ್ನು ಸಮ್ಮಾನಿಸಲಾಯಿತು ಹಾಗೂ ಪ್ರಶಾಂತ ಮಯ್ಯ ದಾರಿಮಕ್ಕಿ ಯವರನ್ನು ಗುರು ಕಾಣಿಕೆ ನೀಡಿ ಗೌರವಿಸಲಾಯಿತು.

ಸುರಭಿ ನಿರ್ದೇಶಕ ಸುಧಾಕರ ಪಿ.ಬೈಂದೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು.ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಸ್ವಾಗತಿಸಿದರು.ಉಪಾಧ್ಯಕ್ಷ ಭಾಸ್ಕರ ಬಾಡ ಹಾಗೂ ಉದಯ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.ಶ್ರೀಧರ ಆಚಾರ್ಯ ವಂದಿಸಿದರು.

News/Giri Shiruru

pic/Shashank Byndoor

Leave a Reply

Your email address will not be published. Required fields are marked *

10 + two =