ಬೈಂದೂರು: ಗ್ರಾಮೀಣ ಭಾಗಗಳನ್ನು ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಕೈಬಿಡಬೇಕೆಂದು ಆಗ್ರಹಿಸಿ ಕಳೆದ 152 ದಿನಗಳಿಂದ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ನಡೆಯುತ್ತಿರುವ ಅನಿ೯ಧಿಷ್ಟಾವಧಿ ಧರಣಿ ಸ್ಥಳಕ್ಕೆ ಕುಂದಾಪುರ ಸಹಾಯಕ ಕಮಿಷನರ್ ರಶ್ಮಿ ಎಸ್.ಆರ್ ಶನಿವಾರ ಬೇಟಿ ನೀಡಿದರು.ಬಳಿಕ ಧರಣಿ ನಿರತ ರೈತರೊಂದಿಗೆ ಮಾತುಕತೆ ನಡೆಸಿ ಈಗಾಗಲೇ ಪ್ರಸ್ತಾವನೆ ಸರಕಾರದ ಹಂತದಲ್ಲಿದ್ದು ತಾಂತ್ರಿಕ ಸಮಸ್ಯೆಗಳಿಂದ ವಿಳಂಬವಾಗುತ್ತಿದ್ದು ಜಿಲ್ಲಾಧಿಕಾರಿಗಳು ಈ ನಿಟ್ಟಿನಲ್ಲಿ ರಾಜ್ಯ ಮಟ್ಟದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ.ಶೀಘ್ರ ಈ ಬಗ್ಗೆ ಗಮನಹರಿಸಲಾಗುವುದು ಎಂದರು.

ಬೈಂದೂರು ತಹಶೀಲ್ದಾರ ರಾಮಚಂದ್ರಪ್ಪ,ಬೈಂದೂರು ರೈತ ಸಂಘದ ದೀಪಕ್ ಕುಮಾರ್ ಶೆಟ್ಟಿ,ಅರುಣ ಕುಮಾರ್ ಶಿರೂರು,ಪದ್ಮಾಕ್ಷ ಗೋಳಿಬೇರು,ಹೆರಿಯ ಪೂಜಾರಿ ಗೋಳಿಬೇರು,ಸುಬ್ರಹ್ಮಣ್ಯ ಬಿಜೂರು,ರಮೇಶ ಶಿರೂರು ಮೊದಲಾದವರು ಹಾಜರಿದ್ದರು.

Leave a Reply

Your email address will not be published. Required fields are marked *

sixteen + nine =