ಬೈಂದೂರು: ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ ಶ್ರೀ ಗುರು ರಾಘವೇಂದ್ರ ಸ್ವಾಮಿ ಜಯಂತಿ ಪ್ರಯುಕ್ತ ಶ್ರೀ ಗುರು ರಾಘವೇಂದ್ರ ಸಾರ್ವಭೌಮರ ವಿಶುದ್ದ ಸಾನಿದ್ಯ ಸಮೃದ್ದಿಗೋಸ್ಕರ ಲಕ್ಷ ತುಳಸಿ ಅರ್ಚನೆ ಮಂಗಳವಾರ ಪೂರ್ವಾಹ್ನ ನಡೆಯಿತು.ಬೆಳಿಗ್ಗೆ ರಾಯರ ಸನ್ನಿಧಿಯಲ್ಲಿ ದೇವಸ್ಥಾನದ ಅರ್ಚಕರಾದ ಸುಬ್ರಾಯ ನಾವಡ ಹಾಗೂ ಮುರುಳಿ ನಾವಡ ಇವರ ನೇತ್ರತ್ವದಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳು ನಡೆಯಿತು. ಸಂಜೆ ಸಂಕಷ್ಟಿ ಭಜಕ ವೃಂದ ಆಲಂದೂರು ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.ಸಾವಿರಾರು ಭಕ್ತಾಧಿಗಳು ಈ ಪೂಜಾ ಕೈಂಕರ್ಯದಲ್ಲಿ ಪಾಲ್ಗೋಂಡು ರಾಯರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸೂಲಿಯಣ್ಣ ಶೆಟ್ಟಿ,ಉಪಾಧ್ಯಕ್ಷ ಎಸ್.ರಾಜು ಪೂಜಾರಿ,ಕಾರ್ಯದರ್ಶಿ ಮಂಜುನಾಥ ಶೆಟ್ಟಿ ಹಾಗೂ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

nineteen − 18 =