ಬೈಂದೂರು; ಕಲೆ, ಸಾಹಿತ್ಯ, ಸಂಗೀತ ಎಲ್ಲವೂ ಮನುಷ್ಯನ ಬದುಕನ್ನು ಉತ್ತಮಗೊಳಿಸುತ್ತವೆ.ಎಂತಹ ಸನ್ನಿವೇಶವನ್ನೂ ಎದುರಿಸುವ ಗಟ್ಟಿತನ ರೂಪಿಸುತ್ತವೆ.ಗ್ರಾಮೀಣ ಭಾಗದಲ್ಲಿ ಹುಟ್ಟಿ ಬೆಳೆದ ಲಾವಣ್ಯಸಂಸ್ಥೆ ರಂಗಭೂಮಿಗೆ ಅಪಾರ ಕೊಡುಗೆ ನೀಡಿದೆ. ಪ್ರಬುದ್ದ ಕಲಾವಿದರ ತಂಡವಾಗಿರುವ ಬೈಂದೂರಿನ ಲಾವಣ್ಯ ಸಂಸ್ಥೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವುದು ಮಹೋನ್ನತವಾದ ಸಾಧನೆಯಾಗಿದೆ. ಆಧುನಿಕತೆಯ ಬದಲಾವಣೆಗಳೊಂದಿಗೆ ರಂಗಭೂಮಿ ತನ್ನ ಮೌಲ್ಯಗಳನ್ನು ಉಳಿಸಿಕೊಂಡು ಮುನ್ನೆಡೆಯಬೇಕಾಗಿದೆ ಹಾಗೂ ಗ್ರಾಮೀಣ ಭಾಗದಲ್ಲಿ ಇಂತಹ ಕಾರ್ಯಕ್ರಮಗಳ ಆಯೋಜನೆ ಶ್ಲಾಘನೀಯವಾಗಿದೆ ಎಂದು ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ ಹೇಳಿದರು ಅವರು ರವಿವಾರ ಬೈಂದೂರು ಶಾರದಾ ವೇದಿಕೆಯಲ್ಲಿ ನಡೆದ ಲಾವಣ್ಯದ ಸ್ಥಾಪಕಾಧ್ಯಕ್ಷ ದಿ.ಉಪ್ಪುಂದ ಶ್ರೀನಿವಾಸ ಪ್ರಭು ರವರ ಸ್ಮರಣಾರ್ಥ ಲಾವಣ್ಯ (ರಿ.)ಬೈಂದೂರು ಇದರ 49ನೇ ವಾರ್ಷಿಕೋತ್ಸವದ ಪ್ರಯುಕ್ತ ಐದು ದಿನಗಳ ಕಾಲ ಬೈಂದೂರಿನಲ್ಲಿ ನಡೆದ ರಂಗಶ್ರೀ -ರಂಗಹಬ್ಬ -2026 ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಈ ಮಾತುಗಳನ್ನಾಡಿದರು.
ಕಿರಿಮಂಜೇಶ್ವರ ನಿವೃತ್ತ ಶಿಕ್ಷಕ ಸದಾಶಿವ ಶ್ಯಾನುಭೋಗ್ ಶುಭಶಂಸನೆಗೈದರು.
ಮುಖ್ಯ ಅತಿಥಿಗಳಾಗಿ ಲಾವಣ್ಯ ಸಂಸ್ಥೆಯ ಅಧ್ಯಕ್ಷ ನರಸಿಂಹ ಬಿ. ನಾಯಕ್,ರಂಗಸ್ಥಳ ಉಪ್ಪುಂದ ಅಧ್ಯಕ್ಷ ರಾಜಾರಾಮ ಭಟ್,ಬೈಂದೂರು ಸೇನೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಿರೀಶ್ ಬೈಂದೂರು,ಸುರಭಿ ಸಂಸ್ಥೆಯ ಅಧ್ಯಕ್ಷ ಆನಂದ ಮದ್ದೋಡಿ,ನಾವುಂದ ಗ್ರಾ.ಪಂ ಅಧ್ಯಕ್ಷ ನರಸಿಂಹ ದೇವಾಡಿಗ,ಲೆಕ್ಕಪರಿಶೋಧಕ ಹಾಗೂ ಶಿವಮೊಗ್ಗ ತೆರಿಗೆ ಸಲಹೆಗಾರ ಮಂಜುನಾಥ ಪಿ.ಶೆಟ್ಟಿ ,ಡಾ.ಬಿ.ಆರ್ ಅಂಬೇಡ್ಕರ್ ಸಂಘದ ಅಧ್ಯಕ್ಷೆ ಸುಶೀಲಾ ಶಿರೂರು,ಉಪಾಧ್ಯಕ್ಷ ರವೀಂದ್ರ ಶ್ಯಾನುಭಾಗ್,ರಾಮ ಕೆರೆಕಟ್ಟೆ,ಲಾವಣ್ಯ ಕಾರ್ಯದರ್ಶಿ ವಿಶ್ವನಾಥ ಆಚಾರ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹವ್ಯಾಸಿ ಯಕ್ಷಗಾನ ಕಲಾವಿದ ಉಮೇಶ ಶ್ಯಾನುಭಾಗ್ ರವರನ್ನು ಲಾವಣ್ಯ ಸಂಸ್ಥೆಯ ವತಿಯಿಂದ ಸಮ್ಮಾನಿಸಲಾಯಿತು. ಮಂಜುನಾಥ ಶಿರೂರು ಸ್ವಾಗತಿಸಿದರು.ನಾಗರಾಜ ಪಿ.ಯಡ್ತರೆ ಕಾರ್ಯಕ್ರಮ ನಿರೂಪಿಸಿದರು. ಮಾಜಿ ಅಧ್ಯಕ್ಷ ಉದಯ ಆಚಾರ್ಯ ಹರೆಗೋಡು ವಂದಿಸಿದರು.
ವರದಿ/ಗಿರಿ ಶಿರೂರು