ಶಿರೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇದರ ಆರ್.ಡಿ.ಎಫ್ ಯೋಜನೆಯಡಿಯಲ್ಲಿ ಶಿರೂರು ಕೆಳಪೇಟೆಯ ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಆರೋಗ್ಯವಂತ  ಸಮಾಜ ನಿರ್ಮಾಣವಾಗಬೇಕಾದರೆ ಆರೋಗ್ಯಕರವಾಗಿ ಮಕ್ಕಳನ್ನು ಬೆಳೆಸಬೇಕಾಗಿದೆ.ಬಾಲ್ಯದಲ್ಲಿ ಪೌಷ್ಠಿಕ ಆಹಾರ,ತಾಯಂದಿರ ಆರೋಗ್ಯ ರಕ್ಷಣೆ ಸೇರಿದಂತೆ ಸಮಗ್ರ ಮಾಹಿತಿ ನೀಡುವಲ್ಲಿ ಅಂಗನವಾಡಿ ಪ್ರಮುಖ ಪಾತ್ರ ವಹಿಸುತ್ತದೆ.ಮಕ್ಕಳಿಗೆ ಉತ್ತಮ ವಾತಾವರಣ ಮುಖ್ಯ.ಪ್ರತಿ ಅಂಶಗಳು ಕೂಡ ಅವರ ಮನಸ್ಸಿನ ಮೇಲೆ ಪರಿಣಾಮ ಬೀರುವುದರಿಂದ ಅಂಗನವಾಡಿ ಕಾರ್ಯಕರ್ತೆಯರ ಜವಬ್ದಾರಿ ಕೂಡ ಹೆಚ್ಚಿದೆ.ಸರಕಾರ ಅಂಗನವಾಡಿಗಳ ಅಭಿವೃದ್ದಿಗೆ ವಿಶೇಷ ಮುತುವರ್ಜಿ ವಹಿಸಿದೆ ಎಂದರು.

ಈ ಸಂದರ್ಭದಲ್ಲಿ ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿ.ಪಂ ಮಾಜಿ ಸದಸ್ಯ ಸುರೇಶ್ ಬಟ್ವಾಡಿ,ತಾ.ಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ,ಗ್ರಾ.ಪಂ ಸದಸ್ಯರಾದ ರವೀಂದ್ರ ಶೆಟ್ಟಿ ಆರ್‍ಮಕ್ಕಿ,ಶಂಕರ ಮೇಸ್ತ,ಬಾಬು ಮೊಗೇರ್ ಅಳ್ವೆಗದ್ದೆ,ಆಕ್ರಮ-ಸಕ್ರಮ ಸಮಿತಿ ಸದಸ್ಯ ದಿನೇಶ್ ಕುಮಾರ್,ಸತೀಶ ಕುಮಾರ್ ಶೆಟ್ಟಿ ಹಾಗೂ ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಅಂಗನವಾಡಿ ಮೇಲ್ವಿಚಾರಕಿ ರೇವತಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಪೇಟೆ ಅಂಗನವಾಡಿ ಶಿಕ್ಷಕಿ ನಾಗರತ್ನ ಕಾರ್ಯಕ್ರಮ ನಿರ್ವಹಿಸಿದರು.ಶಿಕ್ಷಕಿ ವಿದ್ಯಾ ವಂದಿಸದರು.ಸಹಾಯಕಿ ಶಿಲ್ಪಾ ಶ್ಯಾನುಭಾಗ್ ಸಹಕರಿಸಿದರು.

News/pic: Girish shiruru

 

 

 

Leave a Reply

Your email address will not be published.

one × 4 =