ಬೈಂದೂರು:ಮನೆ ಪ್ರವೇಶಿಸಿ ಕಳ್ಳತನಕ್ಕೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಶಿರೂರು ಗ್ರಾಮದ ಕೋಣಮಕ್ಕೆ ಎಂಬಲ್ಲಿ ಮನೆಯ ಹಿಂಬಾಗಿಲು ಒಡೆದು ಒಳ ಪ್ರವೇಶಿಸಿ ಮನೆಯೊಳಗಿನ ಕಪಾಟು ತೆರೆದು ಕಳ್ಳತನಕ್ಕೆ ಪಯತ್ನಿಸುತ್ತಿದ್ದಾಗ ಮನೆಯವರು ಎಚ್ಚರಗೊಂಡು ಬೊಬ್ಬೆ ಹಾಕಿದಾಗ ಹಿಂಬಾಗಿಲಿನಿಂದ ಓಡಿ ಹೋಗಿದ್ದ.ಈ ಕುರಿತು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿ ಆರೋಪಿ ಪೌಜಾನ್ ಅಹ್ಮದ್‌ನನ್ನು ವಶಕ್ಕೆ ಪಡೆದು ಬಂಧಿಸಿದ್ದು ಆರೋಪಿಯನ್ನು ಮಾನ್ಯ ನ್ಯಾಯಾಲವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ

ಕಾರ್ಯಾಚರಣೆಯನ್ನು ಮಾನ್ಯ ಉಡುಪಿ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀ ಹರಿರಾಂ ಶಂಕರ್ ಐ.ಪಿ.ಎಸ್. ರವರ ಅದೇಶದ ಮೇರೆಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಸುಧಾಕರ ನಾಯಕ್ ಉಡುಪಿ ಜಿಲ್ಲೆ ರವರ ನಿರ್ದೇಶನದಂತೆ ಮತ್ತು ಶ್ರೀ ಹೆಚ್.ಡಿ. ಕುಲಕರ್ಣಿ ಪೊಲೀಸ್‌ ಉಪಾಧೀಕ್ಷಕರು ಕುಂದಾಪುರ ಉಪವಿಭಾಗರವರ ಮತ್ತು ಶ್ರೀ ಶಿವಕುಮಾ‌ರ್ ಪೊಲೀಸ್ ವೃತ್ತನಿರೀಕ್ಷಕರು ಬೈಂದೂರುರವರ ಮಾರ್ಗದರ್ಶನದಲ್ಲಿ, ಬೈಂದೂರು ಠಾಣೆಯ ಪಿ.ಎಸ್.ಐ ರವರಾದ ಶ್ರೀ ಸುನೀಲ್ ಕುಮಾರ್. ಬಿ.ವೈ ರವರ ನೇತ್ರತ್ವದಲ್ಲಿ, ಬೈಂದೂರು ಠಾಣೆಯ ಪಿ.ಎಸ್.ಐ ರವರಾದ ನವೀನ ಪಿ. ಬೋರಕರ ಮತ್ತು ಸಿಬ್ಬಂದಿಯವರಾದ ಹೆಚ್ ಸಿ ಚಂದ್ರಶೇಖರ, ಸಿಪಿಸಿ ಚಿದಾನಂದ, ಸಿಪಿಸಿ ಮಾಳಪ್ಪ ದೇಸಾಯಿ ಮತ್ತು ಜೀಪು ಚಾಲಕರಾದ ರಾಮದಾಸ್ ರವರು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುತ್ತಾರೆ.

Leave a Reply

Your email address will not be published. Required fields are marked *

seventeen + three =