ಶಿರೂರು: ಶ್ರೀ ಜಟ್ಟಿಗೇಶ್ವರ ಮತ್ತು ಸಪರಿವಾರ ದೈವಸ್ಥಾನ ಬಪ್ಪನಬೈಲು ಶಿರೂರು ಇದರ 11ನೇ ವರ್ಷದ ವಾರ್ಷಿಕ ವರ್ಧಂತ್ಯೋತ್ಸವ ಕಾರ್ಯಕ್ರಮ ರವಿವಾರ ನಡೆಯಿತು. ಬೆಳಿಗ್ಗೆ ಗ್ರಾಮ ಪುರೋಹಿತರಾದ ಸುರೇಶ ಅವಭೃತ ಇವರ ನೇತ್ರತ್ವದಲ್ಲಿ ಗುರು ಗಣೇಶ ಪೂಜೆ,ಪುಣ್ಯಾಹ,ಕಲಶ ಸ್ಥಾಪನೆ,ದೇವರಿಗೆ ತತ್ವ ಶಕ್ತಿ ಕಲಾವೃದ್ದಿ ಹೋಮ ವಿವಿಧ ಪೂಜಾ ಕೈಂಕರ್ಯಗಳು ಹಾಗೂ ಮದ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಮನೋರಂಜನಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು,ಪದಾಧಿಕಾರಿಗಳು,ಸರ್ವ ಸದಸ್ಯರು,ಯುವಕ ಸಂಘದ ಸದಸ್ಯರು,ಮಹಿಳಾ ಸಂಘದ ಸದಸ್ಯರು ಹಾಗೂ ಊರಿನ ಭಕ್ತಾಧಿಗಳು ಹಾಜರಿದ್ದರು.
PIC/KRISHNA SMART STUDIO SHIRURU