ಬೈಂದೂರು: ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ ಶ್ರೀ ಹನುಮ ಜಯಂತಿ ಪ್ರಯುಕ್ತ ಶ್ರೀ ಆಂಜನೀಯ ದೇವರಿಗೆ ನೂತನವಾಗಿ ನಿರ್ಮಿಸಲ್ಪಟ್ಟ ಪ್ರಭಾವಳಿ ಸಮರ್ಪಣೆ ಹಾಗೂ ಸಾಮೂಹಿಕ ಶ್ರೀ ವಾಯುಸ್ತುತಿ ಪುನಃಶ್ಚರಣಾ ಯಾಗ ಶ್ರೀ ಗುರು ರಾಘವೇಂದ್ರ ಸಾರ್ವಭೌಮರಿಗೆ ಮಹಾಪೂಜೆ ಕಾರ್ಯಕ್ರಮ ಗುರುವಾರ ರಾಯರ ಸನ್ನಿಧಿಯಲ್ಲಿ ನಡೆಯಿತು.

ಬೆಳಿಗ್ಗೆ ತಂತ್ರಿಗಳಾದ ಕೇಂಜ ಶ್ರೀಧರ ತಂತ್ರಿಗಳ ಮುಂದಾಳತ್ವದಲ್ಲಿ ಹಾಗೂ ದೇವಸ್ಥಾನದ ಅರ್ಚಕರಾದ ಸುಬ್ರಾಯ ನಾವಡ,ಮುರುಳಿ ನಾವಡ ಇವರ ನೇತ್ರತ್ವದಲ್ಲಿ ಸಾಮೂಹಿಕ ಪ್ರಾರ್ಥನೆ,ಪುಣ್ಯಾಹ, ಶ್ರೀ ಆಂಜನೇಯ ಸ್ವಾಮಿಗೆ ಪಂಪವಿಶಂತಿ ಕಲಶ,ಪಂಚಾಮೃತ ಅಭಿಷೇಕ,ಕಲಶಾಭಿಷೇಕ,ಸಂಜೆ ರಂಗಪೂಜೆ,ದೀಪಾರಾಧನೆ ಸೇವೆ ಹಾಗೂ ಮುಂತಾದ ಪೂಜಾ ವಿಧಿ ವಿಧಾನಗಳು ನಡೆಯಿತು.

ಈ ಸಂದರ್ಭದಲ್ಲಿ ಟ್ರಸ್ಟ್‌ನ ಅಧ್ಯಕ್ಷರಾದ ಸೂಲಿಯಣ್ಣ ಶೆಟ್ಟಿ, ಉಪಾಧ್ಯಕ್ಷ ಎಸ್.ರಾಜು ಪೂಜಾರಿ,ಕಾರ್ಯದರ್ಶಿ ಮಂಜುನಾಥ ಶೆಟ್ಟಿ,ಸೇವಾ ಸಮಿತಿ ಸದಸ್ಯರು ಹಾಗೂ ಭಕ್ತಾಧಿಗಳು ಹಾಜರಿದ್ದರು.

 

Leave a Reply

Your email address will not be published. Required fields are marked *

eleven + six =