ಬೈಂದೂರು: ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರು ಇದರ ವತಿಯಿಂದ ಎ.16 ರಿಂದ 24 ರ ವರೆಗೆ ನಡೆಯಲಿರುವ ಸೇನೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬುಧವಾರ ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರಿನಲ್ಲಿ ನಡೆಯಿತು.
ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಸೇನೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಬೈಂದೂರು ಸೇನೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಿರೀಶ್ ಬೈಂದೂರು, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ,ದೇವಸ್ಥಾನದ ಅರ್ಚಕ ರಾಜೇಶ್ ಐತಾಳ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಎಸ್.ಜಯರಾಮ ಯಡ್ತರೆ,ಪ್ರಶಾಂತ ಕುಮಾರ್ ಶೆಟ್ಟಿ,ಶಾಂತಾ ಆಚಾರ್ಯ,ದೊಟ್ಟಯ್ಯ ಪೂಜಾರಿ ಬೆಳ್ಗಲ್‌ಕಟ್ಟೆ,ಇಂದಿರಾ ಕೊಠಾರಿ,ಪರಮೇಶ್ವರ್ ಪಟವಾಲ್,ವಸಂತ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

