ಬೈಂದೂರು; ಮಾನವ ಧರ್ಮದಲ್ಲಿ ಹುಟ್ಟಿದ ನಾವುಗಳು ಮುಖ್ಯವಾಗಿ ಮಾನವೀಯತೆ ಮತ್ತು ಮನುಷ್ಯತ್ವ ಗುಣಗಳನ್ನು ಅಳವಡಿಸಿಕೊಳ್ಳಬೇಕು. ತನ್ನ ಸಂಪಾದನೆಯ ಒಂದು ಭಾಗವನ್ನು ಬಡವರ ಅಭ್ಯುದಯಕ್ಕಾಗಿ ವಿನಿಯೋಗಿಸುತ್ತಿರುವುದು ದೇವರಿಗೂ ಪ್ರಿಯವಾದ ಕಾರ್ಯವಾಗಿದೆ. ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ಕಳಕಳಿ ಹೊಂದಿರುವ ಗೋವಿಂದ ಬಾಬು ಪೂಜಾರಿ ಇವರು ತಮ್ಮ ಸತ್ಕಾರ್ಯಗಳ ಮೂಲಕ ಶ್ರೇಷ್ಠ ದಾನವರಲ್ಲಿ ಒಬ್ಬರಾಗಿದ್ದಾರೆ.ಬಡವರ ಕಷ್ಟಕ್ಕೆ ಸ್ಪಂಧಿಸುವ ಹೃದಯಗಳಿಗೆ ಭಗವಂತನ ಸಾಕ್ಷಾತ್ಕಾರ ದೊರೆಯುತ್ತದೆ.ನಮ್ಮಲ್ಲಿರುವ ಸಂಪತ್ತಿನ ಒಂದಂಶವನ್ನು ದಾನ ಮಾಡುವುದರಿಂದ ಸಂತೃಪ್ತಿಯ ಜೊತೆಗೆ ಸೇವೆಯ ಸಾರ್ಥಕತೆ ದೊರೆಯುತ್ತದೆ ಎಂದು ಧರ್ಮಪ್ರಚಾರಕ ಸಂತರು ಸನಾತನ ಸಂಸ್ಥೆಯ ರಮಾನಂದ ಗೌಡ ಹೇಳಿದರು ಅವರು ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ ಇದರ ಶೈಕ್ಷಣಿಕ,ಸಾಮಾಜಿಕ ಸೇವಾ ಸಂಸ್ಥೆ ಇದರ ವತಿಯಿಂದ ಏಳಜಿತ ಗ್ರಾಮದ ಗಣವಡಿಯಲ್ಲಿ ನೂತನವಾಗಿ ನಿರ್ಮಾಣಗೊಂವಿರುವ 19ನೇ ಮನೆ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಈ ಮಾತುಗಳನ್ನಾಡಿದರು.
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಡಾ.ಗೋವಿಂದ ಬಾಬು ಪೂಜಾರಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೂತನವಾಗಿ ನಿರ್ಮಾಣಗೊಂಡ 19ನೇ ಮನೆಯ ಕೀ ಹಸ್ತಾಂತರಿಸಿ ಮಾತನಾಡಿ ಬದುಕಿನ ಪಯಣದಲ್ಲಿ ದುಡಿದ ಒಂದಿಷ್ಟು ಸಂಪತನ್ನು ಸದ್ವಿನಿಯೋಗವಾದಾಗ ಸಾರ್ಥಕತೆ ಮೂಡುತ್ತದೆ.ಈಗಾಗಲೇ ಬೈಂದೂರು ವ್ಯಾಪ್ತಿಯಲ್ಲಿ ಟ್ರಸ್ಟ್ ಹಾಗೂ ವಯಕ್ತಿಕ ನೆಲೆಯಲ್ಲಿ ಅನೇಕ ಮನೆ ನಿರ್ಮಾಣ ಸೇರಿದಂತೆ ವಿವಿಧ ಕೊಡುಗೆಗಳನ್ನು ನೀಡಲಾಗುತ್ತಿದೆ. ಟ್ರಸ್ಟ್ ಮೂಲಕ ನಿರ್ಮಿಸಲಾಗಿರುವ 19ನೇ ಮನೆ ಇದಾಗಿದ್ದು 20ನೇ ಮನೆ ಅಂಪಾರಿನಲ್ಲಿ ಶೀಘ್ರದಲ್ಲಿ ಉದ್ಘಾಟನೆಗೊಳ್ಳಲಿದ್ದು ಮತ್ತಷ್ಟು ಕಾರ್ಯಗಳು ಟ್ರಸ್ಟ್ ಮೂಲಕ ನಡೆಯಲಿದೆ ಎಂದರು.
ಮುಖ್ಯ ಅತಿಥಿಗಳಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹಾಲಿಂಗ ನಾಯ್ಕ ಜೋಗಿಜಡ್ಡು,ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ,ಊರಿನ ಹಿರಿಯರಾದ ಗಣಪ ಮರಾಠಿ,ಉದ್ಯಮಿ ದಿನೇಶ ಪೂಜಾರಿ ಮಂಗಳೂರು,ಎಂ.ಜೆ ಶೆಟ್ಟಿ ಮಂಗಳೂರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮನೆಯ ಯಜಮಾನರಾದ ಅಣ್ಣಯ್ಯ ಮರಾಠಿ ಕುಟುಂಬದವರಿಗೆ ಮನೆಯ ಕೀ ಹಸ್ತಾಂತರಿಸಲಾಯಿತು ಹಾಗೂ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಡಾ.ಗೋವಿಂದ ಬಾಬು ಪೂಜಾರಿ ಯವರನ್ನು ಮನೆಯವರ ವತಿಯಿಂದ ಸಮ್ಮಾನಿಸಲಾಯಿತು.
ವರಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ಬೈಂದೂರು ಶಾಖೆಯ ವ್ಯವಸ್ಥಾಪಕ ನಾಗರಾಜ ಪಿ.ಯಡ್ತರೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಸುಶಾಂತ ಆಚಾರ್ಯ ವಂದಿಸಿದರು.
ವರದಿ/ಚಿತ್ರ: ಗಿರಿ ಶಿರೂರು