ಶಿರೂರು: ಶಿರೂರಿನ ಪ್ರಸಿದ್ದ ಐತಿಹಾಸಿಕ ಹಿನ್ನೆಲೆಯ ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಇದರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮ ಎಪ್ರಿಲ್ 11 ರಿಂದ ಎಪ್ರಿಲ್ 14 ರ ವರೆಗೆ ನಡೆಯಲಿದೆ.

ಕಾಯ೯ಕ್ರಮಗಳ ವಿವರ

ಎ.11 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಽಕಾರಿ ಡಾ.ಡಿ ವಿರೇಂದ್ರ ಹೆಗ್ಗಡೆ ಯವರ ಶುಭಾಶೀರ್ವಾದಗಳೊಂದಿಗೆ ಮಾರ್ಗದರ್ಶಕರಾದ ಡಾ.ಜಿ.ಶಂಕರ್ ನೇತ್ರತ್ವದಲ್ಲಿ ವೇದಮೂರ್ತಿ ಶ್ರೀ ರಾಮಚಂದ್ರ ಪರಂಭಟ್ಟ ಶಿರಾಲಿ ತಂತ್ರಿವರ್ಯರ ನೇತ್ರತ್ವದಲ್ಲಿ ಪೂಜಾ ವಿಧಿ ವಿಧಾನಗಳು ನಡೆಯಲಿದೆ.ಬೆಳಿಗ್ಗೆ 10;30ಕ್ಕೆ ಶ್ರೀಮತಿ ಶಾಲಿನಿ ಜಿ.ಶಂಕರ್ ವೇದಿಕೆ ಲೋಕಾರ್ಪಣೆಗೊಳ್ಳಲಿದೆ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮದಲ್ಲಿ ವಿವಿಧ ಧಾರ್ಮಿಕ ಮುಖಂಡರು,ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ ಪ್ರಸಿದ್ದ ಕಲಾವಿದರಿಂದ ದಾಸ ಸಿಂಚನ ಭಜನಾಮೃತ ಕಾರ್ಯಕ್ರಮ.ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಹಾಗೂ ವೀಣಾವಾದನ ನಡೆಯಲಿದೆ. ಸಂಜೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕ್ರತಿಕ ವೈಭವ ಕಾರ್ಯಕ್ರಮ.ಧನಲಕ್ಷ್ಮೀ ಮೊಗೇರ್ ಇವರಿಂದ ಭರತನಾಟ್ಯ ಪ್ರದರ್ಶನಗೊಳ್ಳಲಿದೆ.ರಾತ್ರಿ 8 ಗಂಟೆಗೆ ಸನಾತನ ರಾಷ್ಟ್ರಾಂಜಲಿ ಇವರಿಂದ ಭರತನಾಟ್ಯ ವೈಭವ ನಡೆಯಲಿದೆ.

ಎ.12 ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ದೇವರ ನೂತನ ಬಿಂಬ ಪ್ರತಿಷ್ಠೆ ,ಶಿಖರ ಕಲಶ ಪ್ರತಿಷ್ಟೆ,ಕಲಾಭಿವೃದ್ದಿ ಹವನ,ಧಾರ್ಮಿಕ ಕಲಾಪಗಳು ,ಸಂಜೆ ಬ್ರಹ್ಮ ಕಲಶ ಸ್ನಪನಾಧಿವಾಸ ಬಲಿ ಮುಂತಾದ ಪೂಜಾ ವಿಧಿ ವಿಧಾನಗಳು ನಡೆಯಲಿದೆ.

ಬೆಳಿಗ್ಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದಲ್ಲಿ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣ ಶ್ರೀ ಮಾತಾ ಅಮೃತಾನಂದಮಯಿ ಮಠ ಬೋಳೂರು ಮಂಗಳೂರು ಆಶೀರ್ವಚನ ನೀಡಲಿದ್ದಾರೆ ಮುಂತಾದ ಗಣ್ಯರು ಉಪಸ್ಥಿತರಿರಲಿದ್ದಾರೆ.

ಸಂಜೆ ಸಮುದ್ರ ತೀರದ ನಾಟ್ಯ ಗಣಪತಿ ವೇದಿಕೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.ಸಭಾ  ಕಾರ್ಯಕ್ರಮದಲ್ಲಿ ವಿವಿಧ ಸಚಿವರು,ಲೋಕಸಭಾ ಸದಸ್ಯರು,ಶಾಸಕರು,ಮಾಜಿ ಶಾಸಕರು ಹಾಗೂ ಮುಂತಾದ ಗಣ್ಯರು ಉಪಸ್ಥಿತರಿರಲಿದ್ದಾರೆ.ಬಳಿಕ ಸಾಂಸ್ಕ್ರತಿಕ ಸೌರಭ ಸಂಜೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕ್ರತಿಕ ವೈಭವ ಕಾರ್ಯಕ್ರಮ ಹಾಗೂ ಶ್ರೀ ಗಣೇಶ ಕುದ್ರೋಳಿ ಇವರಿಂದ ವಿಸ್ಮಯ ಜಾದೂ ಪ್ರದರ್ಶನ ನಡೆಯಲಿದೆ.

ಎ.13 ರಂದು ಬೆಳಿಗ್ಗೆ ಅಷ್ಟದ್ರವ್ಯ ಮಹಾಗಣಪತಿ ಯಾಗ ಹಾಗೂ ಮಹಾಪೂಜೆ ಹಾಗೂ ವಿವಿಧ ಪೂಜಾ ವಿಧಿ ವಿಧಾನಗಳು ನಡೆಯಲಿದ್ದು ಬಳಿಕ ಶ್ರೀಮದ್ ಜಗದ್ಗುರು ಆದಿ ಶಂಕರಾಚಾರ್ಯ ಮಹಾ ಸಂಸ್ಥಾನಂ ಶ್ರೀಮದ್ ಎಡನೀರು ಮಠ ಕಾಸರಗೋಡು ಸ್ವಾಮೀಜಿ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಸ್ವಾಮೀಜಿ ಯವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡು ಅವರ ಅಮೃತ ಹಸ್ತದಿಂದ ಬ್ರಹ್ಮಕಲಶಾಭಿಷೇಕ ನಡೆಯಲಿದ್ದು ಬಳಿಕ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಲಿದ್ದಾರೆ ಹಾಗೂ ಮುಂತಾದ ಗಣ್ಯರು ಉಪಸ್ಥಿತರಿರಲಿದ್ದಾರೆ.

ಸಂಜೆ ಸಮುದ್ರ ತೀರದ ನಾಟ್ಯ ಗಣಪತಿ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು ಮುಂತಾದ ಗಣ್ಯರು ಉಪಸ್ಥಿತರಿರಲಿದ್ದಾರೆ ಬಳಿಕ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕ್ರತಿಕ ಸೌರಭ ನಡೆಯಲಿದೆ.ರಾತ್ರಿ ಶ್ರೀ ಸಾಯಿಶಕ್ತಿ ಕಲಾ ಬಳಗ ಉರ್ವ ಚಿಲಿಂಬಿ ಮಂಗಳೂರು ಇವರಿಂದ ಜೋಡು ಜೀಟಿಗೆ ನಾಟಕ ಪ್ರದರ್ಶನಗೊಳ್ಳಲಿದೆ.

ಎ.14 ರಂದು ಶ್ರೀ ಬೊಬ್ಬರ್ಯ ದೈವಸ್ಥಾನ ಅಳ್ವೆಗದ್ದೆ ಶಿರೂರು ಇದರ 18ನೇ ವರ್ಧಂತ್ಯೋತ್ಸವ ಕಾರ್ಯಕ್ರಮ ನಡೆಯಲಿದ್ದು ಬೆಳಿಗ್ಗೆ ಕಲಾವೃದ್ದಿ ಹೋಮ,ಪೂರ್ಣಾಹುತಿ,ಕಲಶಾಭಿಷೇಕ ಮಹಾಪೂಜೆ ನಡೆಯಲಿದೆ. ಸಂಜೆ ಸಮುದ್ರ ತೀರದ ನಾಟ್ಯ ಗಣಪತಿ ವೇದಿಕೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಮುಂತಾದ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಸಂಜೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕ್ರತಿಕ ಕಾರ್ಯಕ್ರಮ ರಾತ್ರಿ 8:30ಕ್ಕೆ ಕಲಾಧರ ಯಕ್ಷಗಾನ ಮಂಡಳಿ ಜಲವಳ್ಳಿ ಅತಿಥಿ ಕಲಾವಿಧರ ಕೂಡುವಿಕೆಯಿಂದ ಜ್ವಾಲಾ ಜಾಹ್ನವಿ ಹಾಗೂ ರತ್ನಾವತಿ ಕಲ್ಯಾಣ ಯಕ್ಷಗಾನ ಪ್ರಧರ್ಶನಗೊಳ್ಳಲಿದೆ.

ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾಧಕರಿಗೆ ಸಮ್ಮಾನ,ಸಾಂಸ್ಕ್ರತಿಕ ಕಾರ್ಯಕ್ರಮಗಳು ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.

ಈ ಧಾರ್ಮಿಕ ಕಾರ್ಯಕ್ರಮಕ್ಕೆ ತಮ್ಮೆಲ್ಲರನ್ನು ಪ್ರೀತಿ ಪೂರ್ವಕವಾಗಿ ಸ್ವಾಗತಿಸುವ ಗೌರವಾಧ್ಯಕ್ಷರು ನಾಡೋಜ ಡಾ.ಜಿ.ಶಂಕರ್  ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು,ರಾಮ ಎನ್.ಅಳ್ವೆಗದ್ದೆ ಅಧ್ಯಕ್ಷರು ಜೀರ್ಣೋದ್ದಾರ ಸಮಿತಿ ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ,ಗಣಪತಿ ಎಸ್.ಮೊಗವೀರ ಅಧ್ಯಕ್ಷರು ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಹಾಗೂ ಸಮಿತಿಯ ಸರ್ವ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ/ಗಿರೀಶ್ ಶಿರೂರು

 

Leave a Reply

Your email address will not be published. Required fields are marked *

12 − 3 =