ಶಿರೂರು: ರಾಜ್ಯ ಸರಕಾರ ನೀಡುವ 2024-25ನೇ ಸಾಲಿನ ಪ್ರತಿಷ್ಠಿತ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೈಂದೂರು ತಾಲೂಕಿನ ಶಿರೂರು ಗ್ರಾಮ ಪಂಚಾಯತ್ ತಾಲೂಕು ಮಟ್ಟದಲ್ಲಿ ಆಯ್ಕೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಅತೀ ದೊಡ್ಡ ಗ್ರಾಮ ಪಂಚಾಯತ್ ಸುಸಜ್ಜಿತ ಆಡಳಿತ ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಗ್ರಾಮ ನೈರ್ಮಲ್ಯಕ್ಕೆ ನೀಡಿದ ಆಧ್ಯತೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಜನರಿಗೆ ಸರಕಾರದ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸುವುದು ನಿಯಮಿತವಾಗಿ ಸಭೆಗಳನ್ನು ಆಯೋಜಿಸಿ ಪಾರದರ್ಶಕತೆ ಕಾಯ್ದುಕೊಳ್ಳುವುದು, ಸುಸಜ್ಜಿತ ಡಿಜಿಟಲ್ ಗ್ರಂಥಾಲಯ, ಶುದ್ಧ ಕುಡಿಯುವ ನೀರು ಸರಬರಾಜು, ಸೂಕ್ತ ರೀತಿಯಲ್ಲಿ ವೈಜ್ಞಾನಿಕ ಘನತ್ಯಾಜ್ಯ ವಿಲೇವಾರಿ, ನರೇಗಾ ಯೋಜನೆಯ ಯಶಸ್ವಿ ಅನುಷ್ಠಾನ ಹಾಗೂ ಗುಣಮಟ್ಟದ ಆರೋಗ್ಯ ಸೇವೆಗಳಂತಹ ಹಲವು ಮಾನದಂಡಗಳನ್ನು ಆಧರಿಸಿ ಈ ಆಯ್ಕೆ ನಡೆದಿದೆ. ಪಂಚಾಯತ್ ನ ಹಿಂದಿನ ಆಡಳಿತ ಮಂಡಳಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿಗಳು, ಲೆಕ್ಕ ಸಹಾಯಕರು, ಸಿಬ್ಬಂದಿ ವರ್ಗ, ಮೇಲಾಧಿಕಾರಿಗಳು ಹಾಗೂ ಸಂಪೂರ್ಣ ಸಹಕಾರ ನೀಡಿದ ಗ್ರಾಮಸ್ಥರಿಂದ ಈ ಸಾಧನ ಸಾಧ್ಯವಾಗಿದೆ. ಈ ಪ್ರಶಸ್ತಿಯು ಗ್ರಾಮದ ಅಭಿವೃದ್ಧಿಯ ವಿಷಯದಲ್ಲಿ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಮತ್ತಷ್ಟು ಉತ್ತಮ ಸೇವೆಗಳನ್ನು ನೀಡಲು ಮತ್ತು ಮಾದರಿ ಗ್ರಾಮವಾಗಿ ಮುನ್ನಡೆಯಲು ಈ ಪುರಸ್ಕಾರವು ದೊಡ್ಡ ಪ್ರೇರಣೆಯಾಗಿದೆ.ಇದು ಶಿರೂರು ಗ್ರಾಮ ಪಂಚಾಯತ್ ಸ್ಥಾಪನೆಗೊಂಡ ಬಳಿಕ ದೊರೆತ ಅತ್ಯಂತ ಶ್ರೇಷ್ಟ ಗೌರವಿಸಲಾಗಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಂದ್ರ ಶೆಟ್ಟಿ ತಿಳಿಸಿದ್ದಾರೆ.