ಬೈಂದೂರು: ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ನಡೆಯುತ್ತಿರುವ ಅನಿಧಿ೯ಷ್ಟಾವಧಿ ಧರಣಿ 200ನೇ ದಿನಕ್ಕೆ ಕಾಲಿಟ್ಟಿದೆ.ಕಳೆದ ಆರು ತಿಂಗಳಿಂದ ಹೋರಾಟ ನಡೆಸುತ್ತಿದ್ದರು ಸರಕಾರ, ಜಿಲ್ಲಾಡಳಿತ ಸಮರ್ಪಕವಾಗಿ ಸ್ಪಂಧಿಸದ ಕುರಿತು ರೈತರು ಆಕ್ರೋಶ ವ್ಯಕ್ತಪಡಿಸಿದರು.ಶುಕ್ರವಾರ ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ ಉಡುಪಿ ಜಿಲ್ಲೆಯಲ್ಲಿ ನ್ಯಾಯವನ್ನು ಆಗ್ರಹಿಸಿ ರೈತರು ನಡೆಸುತ್ತಿರುವ ಅತೀ ದೀರ್ಘ ಧರಣಿ ಇದಾಗಿದ್ದು ಜಿಲ್ಲಾಡಳಿತ,ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳು ಇದುವರೆಗೆ ರೈತರ ಬೇಡಿಕೆಯನ್ನು ಈಡೇರಿಸಿಲ್ಲ ಕೆಲವು ತಾಂತ್ರಿಕ ಕಾರಣಗಳಿಂದ ವಿಳಂಬವಾಗುತ್ತಿದೆ.ಹೀಗಾಗಿ ಸರಕಾರ ಈ ಕುರಿತು ತಕ್ಷಣ ಸ್ಪಂಧಿಸಬೇಕು ಎನ್ನುವ ಉದ್ದೇಶದಿಂದ ಎಪ್ರಿಲ್ 18 ರಂದು ಮದ್ಯಾಹ್ನ ಬೈಂದೂರಿನಲ್ಲಿ ಬ್ರಹತ್ ಪ್ರತಿಭಟನೆ ನಡೆಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಅರುಣ್ ಕುಮಾರ್ ಶಿರೂರು,ವೀರಭದ್ರ ಗಾಣಿಗ,ಉದಯ ಮಾಕೋಡಿ,ರಮೇಶ ಶಿರೂರು,ಮಹಾದೇವ ಪೂಜಾರಿ ಕಿಸ್ಮತ್ತಿ ಹಾಗೂ ರೈತ ಮುಖಂಡರು ಹಾಜರಿದ್ದರು.