ಬೈಂದೂರು: ವಕೀಲರ ಸಂಘ ಬೈಂದೂರು ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬೈಂದೂರು ನ್ಯಾಯಾಲಯ ಕಛೇರಿ ಸಭಾಂಗಣದಲ್ಲಿ ನಡೆಯಿತು.

ನ್ಯಾಯಮೂರ್ತಿಗಳಾದ ಇ. ಎಸ್. ಇಂದಿರೇಶ್ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ವಕಾಲತ್ತಿನ ಪ್ರಮುಖ ಕೌಶಲ್ಯಗಳು ಕುರಿತು ಉಪನ್ಯಾಸ ನೀಡಿ ವಕೀಲರಿಗೆ ಪ್ರೇರಣಾದಾಯಕ ಸಂದೇಶ ನೀಡಿದರು.

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಿರಣ್ ಗಂಗಣ್ಣ,ಸಿವಿಲ್ ನ್ಯಾಯಾಧೀಶರಾದ ಕೆ. ಯು. ವಿದ್ಯಾ ಎ. ಎಸ್. ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನ್ಯಾಯಮೂರ್ತಿ ಇ. ಎಸ್. ಇಂದಿರೇಶ್ ಅವರನ್ನು ಬಾರ್ ಅಸೋಸಿಯೇಷನ್ ವತಿಯಿಂದ ಸನ್ಮಾನಿಸಲಾಯಿತು, ವಕೀಲರಾದ ಗಣೇಶ್ ಮೇಸ್ತ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಕಾರ್ಯದರ್ಶಿ ಲಿಂಗಪ್ಪ ಮೇಸ್ತ ವಂದಿಸಿದರು.

Leave a Reply

Your email address will not be published. Required fields are marked *

four × 2 =