ಶಿರೂರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ 2022ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭ ಡಿ.24 ರಂದು ನಡೆಯಲಿದೆ.ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.ಶಿರೂರು ಗ್ರಾ.ಪಂ ಅಧ್ಯಕ್ಷೆ ಜಿ.ಯು ದಿಲ್‌ಶಾದ್ ಬೇಗಂ ಅಧ್ಯಕ್ಷತೆ ವಹಿಸಲಿದ್ದಾರೆ ಹಾಗೂ ಮುಂತಾದ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈವಿದ್ಯ ಹಾಗೂ ಶ್ರೀಕೃಷ್ಣ ದೇವರಾಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಡಿ.24 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಶಾಲಾ ವಾರ್ಷಿಕೋತ್ಸವ ಸಮಾರಂಭ
ByGiri shiruru
Dec 19, 2022