ಬೈಂದೂರು: ಯಾರು ಪುಣ್ಯ ಕಾರ್ಯದಲ್ಲಿ ಮನಸಾರೆ ಪಾಲ್ಗೋಳ್ಳುತ್ತಾರೆ ಅವರಿಗೆ ಜೀವನದಲ್ಲಿ ಯಶಸ್ಸು ಸಾಧ್ಯ ಮತ್ತು ಶಾಂತಿ ಲಭಿಸುತ್ತದೆ ಎಂದು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು ಅವರು ಗೋಳಿಹೊಳೆ ಸಮೀಪದ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಮೀನುಗಾರಿಕಾ ಸಚಿವ ಎಸ್.ಮಂಕಾಳ ವೈದ್ಯ ಅಧ್ಯಕ್ಷತೆಯಲ್ಲಿ ಜುಲೈ 28 ರಿಂದ ಆರಂಭವಾಗಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ 48 ದಿನಗಳ ಚಾರ್ತುಮಾಸ ವೃತಾಚರಣೆ ಪೂರ್ವಭಾವಿ ಸಭೆಯಲ್ಲಿ ಆಶೀರ್ವಚನ ನೀಡಿದರು.

ಶಾಸಕ ಗುರುರಾಜ ಗಂಟಿಹೊಳೆ,ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ,ಜಿ.ಪಂ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ,ಉದ್ಯಮಿ ಗೋವಿಂದ ಬಾಬು ಪೂಜಾರಿ,ಕೆ.ಆರ್.ನಾಯ್ಕ ,ಬೈಂದೂರು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ ಪೂಜಾರಿ,ಚಾತುರ್ಮಾಸ್ಯ ಸಂಚಾಲಕ ಶಿವರಾಜ್ ಪೂಜಾರಿ, ಅಶೋಕ್ ಪೂಜಾರಿ ಬೀಜಾಡಿ, ನರಸಿಂಹ ಪೂಜಾರಿ ಪಡುಕೋಣೆ, ಗಣೇಶ್ ಪೂಜಾರಿ ಕೆಂಚನೂರು, ಸಂತೋಷ್ ಪೂಜಾರಿ ಕಕುಂಜೆ, ಗೋವಿಂದ್ ಪೂಜಾರಿ, ಕಂಬಳ ಸಮಿತಿ ಅಧ್ಯಕ್ಷ ಮಂಜು ಪೂಜಾರಿ ಸಸಿಹಿತ್ಲು, ಮತ್ತಿತರರು ಉಪಸ್ಥಿತರಿದ್ದು ಈ ಧಾರ್ಮಿಕ ಸಂಕಲ್ಪಕ್ಕೆ ಸಾಕ್ಷಿಯಾದರು.

Leave a Reply

Your email address will not be published. Required fields are marked *

thirteen − one =