ಬೈಂದೂರು,ಎ.22; ಮಹೋತೊಭಾರ ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರು ಇದರ ಮನ್ಮಹಾರಥೋತ್ಸವ ಬುಧವಾರ ಸಂಭ್ರಮ ಸಡಗರದಿಂದ ನಡೆಯಿತು. ಬೆಳಿಗ್ಗೆ ದೇವರಿಗೆ ನಿತ್ಯ ಬಲಿ, ಶತರುದ್ರಾಭಿಷೇಕ, ರಥ ಬಲಿ, ಕ್ಷೇತ್ರಪಾಲ ಬಲಿ, ಪಂಚಾಮೃತ ಅಭಿಷೇಕ, ವಿಶೇಷ ಭೂತ ಬಲಿ, ರಥಾರೋಹಣ ಸೇರಿದಂತೆ ಹಲವು ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ಸಂಜೆ ಸಂಭ್ರಮ ಸಡಗರದಿಂದ ಮನ್ಮಹಾರಥೋತ್ಸವ ನಡೆಯಿತು.ಸಾವಿರಾರು ಭಕ್ತರು ಆಗಮಿಸಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡರು.

ಈ ಸಂಧರ್ಭದಲ್ಲಿ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಿರೀಶ್ ಬೈಂದೂರು, ಸದಸ್ಯರಾದ ರಾಜೇಶ ಐತಾಳ್, ಬಿ. ದೊಟ್ಟಯ್ಯ ಪೂಜಾರಿ, ಪರಮೇಶ್ವರ ಪಟ್ವಾಲ್, ಪ್ರಶಾಂತ ಕುಮಾರ್ ಶೆಟ್ಟಿ, ಜಯರಾಮ ಯಡ್ತರೆ, ವಸಂತ ಕುಮಾರ್ ಶೆಟ್ಟಿ, ಇಂದಿರಾ ಕೊಠಾರಿ, ಶಾಂತಾ ಆಚಾರ್ಯ,ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ,ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಜಿ.ಪಂ ಮಾಜಿ ಅಧ್ಯಕ್ಷ ಎಸ್ .ರಾಜು ಪೂಜಾರಿ,ಜಿ.ಪಂ ಮಾಜಿ ಸದಸ್ಯ ಸುರೇಶ ಬಟ್ವಾಡಿ,ಉದ್ಯಮಿ ಸುಖಾನಂದ ಶೆಟ್ಟಿ,ಧಾರ್ಮಿಕ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು,ದೇವಸ್ಥಾನದ ಸಿಬಂದಿಗಳು ಹಾಗೂ ಅರ್ಚಕರು ಹಾಜರಿದ್ದರು.

ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಮಾರ್ಗದರ್ಶನದಲ್ಲಿ ಪಿಎಸ್‌ಐ ಸುನೀಲ್ ಕುಮಾರ್ ನೇತೃತ್ವದಲ್ಲಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ವರದಿ/ಚಿತ್ರ: ಗಿರಿ ಶಿರೂರು

Leave a Reply

Your email address will not be published. Required fields are marked *

5 × one =