ಬೈಂದೂರು: ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಗುರುವಾರ ಬೈಂದೂರು ಸಮೀಪದ ವತ್ತಿನೆಣೆ ಬಳಿ ನಡೆದಿದೆ. ಭಟ್ಕಳದಿಂದ ಕುಂದಾಪುರ ಕಡೆಗೆ ಸಾಗುತ್ತಿದ ಕಾರು ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿದೆ.ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರಿನಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದರೆ.
