ಶಿರೂರು: ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಇದರ ನೂತನ ಶಿಲಾಮಯ ಮಹಾಗಣಪತಿ ದೇವಸ್ಥಾನದಲ್ಲಿ ಮಂಗಳವಾರ ಅಂಗಾರಕ ಸಂಕಷ್ಠಿ ನಡೆಯಿತು. ಬೆಳಿಗ್ಗೆ ಸಾರ್ವಜನಿಕ ಗಣಹೋಮ ಹಾಗೂ ಮುಂತಾದ ಪೂಜಾ ವಿಧಿ ವಿಧಾನಗಳು ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.ಬೆಳಿಗ್ಗೆ ಸಾವಿರಾರು ಭಕ್ತರು ಆಗಮಿಸಿ ಮಹಾಗಣಪತಿ ದೇವರ ದಿವ್ಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ರಾಮ ಎನ್.ಅಳ್ವೆಗದ್ದೆ,ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಣಪತಿ ಎಸ್.ಮೊಗವೀರ, ದೇವಸ್ಥಾನದ ಗೌರವಾಧ್ಯಕ್ಷ ನಾರಾಯಣ ಟಿ.ಅಳ್ವೆಗದ್ದೆ ,ಸಮಿತಿಯ ಸರ್ವ ಸದಸ್ಯರು,ಜೀರ್ಣೋದ್ದಾರ ಸಮಿತಿ ಸದಸ್ಯರು ಹಾಗೂ ಭಕ್ತಾಧಿಗಳು ಹಾಜರಿದ್ದರು.



