ಬೈಂದೂರು: ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಬಲಿಷ್ಟ ಮತ್ತು ದೊಡ್ಡ ಸಂಘಟನೆಯಾಗಿರುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಅತ್ಯಂತ ದೊಡ್ಡ ವ್ಯಾಪ್ತಿಯನ್ನು ಹೊಂದಿದೆ.ತಾಲೂಕು ಕೇಂದ್ರವಾದ ಬೈಂದೂರಿನಲ್ಲಿ ಸ್ವಂತಃ ಕಛೇರಿ ಅತ್ಯಗತ್ಯವಾಗಿದ್ದು ಇದರಿಂದಾಗಿ ತಾಲೂಕು ಕೇಂದ್ರವಾದ ಹಿರಿಮೆ ಇನ್ನಷ್ಟು ವೃದ್ದಿಸುತ್ತದೆ.ಸರಕಾರಿ ನೌಕರರು ಸರಕಾರದ ಆಡಳಿತ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ಮುಟ್ಟಿಸುವಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಇದರಿಂದಾಗಿ ಸಂಘದ ಗೌರವ ಕೂಡ ಇನ್ನಷ್ಟು ಹೆಚ್ಚಿಸಲಿದೆ ಎಂದು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು ಅವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೈಂದೂರು ತಾಲೂಕು ಇದರ ನೂತನ ಕಛೇರಿಯನ್ನು ಬೈಂದೂರಿನಲ್ಲಿ ಉದ್ಘಾಟಿಸಿದರು ಬಳಿಕ ರೋಟರಿ ಸಮುದಾಯ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಈ ಮಾತುಗಳನ್ನಾಡಿದರು.
ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ,ಕ.ರಾ.ಪ್ರಾ.ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಅಂಪಾರು ದಿನಕರ ಶೆಟ್ಟಿ,ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ,ಜಿ.ಪಂ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ,ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಜಿ.ಪಂ ಮಾಜಿ ಸದಸ್ಯರಾದ ಮದನ್ ಕುಮಾರ್ ಉಪ್ಪುಂದ,ಗೌರಿ ದೇವಾಡಿಗ,ತಾಲೂಕು ಕೆ.ಡಿ.ಪಿ ಸದಸ್ಯ ಶೇಖರ ಪೂಜಾರಿ,ಉದ್ಯಮಿ ಸುರೇಶ ಶೆಟ್ಟಿ ಉಪ್ಪುಂದ,ಬಿ.ಟಿ ಲೋಕೇಶ್,ನಾಗೇಶ,ಅಕ್ಷರ ದಾಸೋಹ ಸಮಿತಿಯ ಚಂದ್ರ ನಾಯ್ಕ,ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಜೇಶ್,ಎಮ್.ಎಮ್.ಪೌಂಡೇಶನ್‌ನ ಅರುಣ್ ಕುಮಾರ್ ಶಿರೂರು,ಕ.ರಾ.ನೌ.ಸಂಘದ ಗೌರವಾಧ್ಯಕ್ಷ ಷರೀಫ್,ಖಜಾಂಚಿ ಉದಯ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.








ಈ ಸಂದರ್ಭದಲ್ಲಿ ಎಸ್.ಎಸ್.ಎಲ್ ಸಿ ಹಾಗೂ ಪಿ.ಯು.ಸಿ ವಿಭಾಗದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿಕ್ಷಕರನ್ನು ಸಮ್ಮಾನಿಸಲಾಯಿತು ಬಳಿಕ ಬೈಂದೂರು ಗಾಂಧಿ ಮೈದಾನದಲ್ಲಿ ಬೈಂದೂರು ತಾಲೂಕು ಸರಕಾರಿ ನೌಕರರ ಕ್ರೀಡಾಕೂಟ ನಡೆಯಿತು.
ಕ.ರಾ.ಪ್ರಾ.ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಶಿಕ್ಷಕ ಸುಬ್ರಹ್ಮಣ್ಯ ಜಿ.ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು.ಗಣಪತಿ ಹೋಬಳಿದಾರ್ ವಂದಿಸಿದರು.
ವರದಿ/ಚಿತ್ರ: ಗಿರಿ ಶಿರೂರು