ಬೈಂದೂರು: ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ ಶ್ರೀ ಗುರು ರಾಘವೇಂದ್ರ ಸಾರ್ವಭೌಮರ ವೃಂದಾವನ ಪುನಃ ಪ್ರತಿಷ್ಠೆ ಮಹೋತ್ಸವದ ಅಂಗವಾಗಿ ಪ್ರಥಮ ಪ್ರತಿಷ್ಠಾ ವರ್ಧಂತ್ಯೋತ್ಸವ ಕಾರ್ಯಕ್ರಮ ಮೇ.28 ರಂದು ನಡೆಯಲಿದೆ.
ಬೆಳಿಗ್ಗೆ ಅರ್ಚಕರ ಸಮ್ಮುಖದಲ್ಲಿ ಮಹಾಪ್ರಾರ್ಥನೆ,ಪುಣ್ಯಾಹ,ದೇವನಾಂಧಿ,ವಾಸ್ತುಹೋಮ,ವಾಸ್ತು ಪೂಜೆ,ಕಲಶಾಭಿಷೇಕ,ಸಾನಿಧ್ಯ ಕಲಶೋತ್ಸವ ಹಾಗೂ ಮದ್ಯಾಹ್ನ ಮಹಾಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.ಸಂಜೆ ಸ್ಥಳೀಯರಿಂದ ಭಜನೆ ಬಳಿಕ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನೆ ಇದರ ಅತಿಥಿ ಕಲಾವಿದರ ಕೂಡುವಿಕೆಯಿಂದ ಶ್ರೀ ಕೃಷ್ಣ ಪಾರಿಜಾತ ಕಾರ್ತವೀರ್ಯ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.