ಬೈಂದೂರು: ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ ಶ್ರೀ ಗುರು ರಾಘವೇಂದ್ರ ಸಾರ್ವಭೌಮರ ವೃಂದಾವನ ಪುನಃ ಪ್ರತಿಷ್ಠೆ ಮಹೋತ್ಸವದ ಅಂಗವಾಗಿ ಪ್ರಥಮ ಪ್ರತಿಷ್ಠಾ ವರ್ಧಂತ್ಯೋತ್ಸವ ಕಾರ್ಯಕ್ರಮ ಗುರುವಾರ ಸಂಪನ್ನಗೊಂಡಿತು.
ಬೆಳಿಗ್ಗೆ ತಂತ್ರಿಗಳಾದ ಕೇಂಜ ಶ್ರೀಧರ ತಂತ್ರಿಗಳ ಮಾರ್ಗದರ್ಶನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಸುಬ್ರಾಯ ನಾವಡ ಹಾಗೂ ಮುರುಳಿ ನಾವಡ ಇವರ ಮುಂದಾಳತ್ವದಲ್ಲಿ ಮಹಾಪ್ರಾರ್ಥನೆ,ಪುಣ್ಯಾಹ,ದೇವನಾಂಧಿ,ವಾಸ್ತುಹೋಮ,ವಾಸ್ತು ಪೂಜೆ,ಕಲಶಾಭಿಷೇಕ,ಸಾನಿಧ್ಯ ಕಲಶೋತ್ಸವ ಕಾರ್ಯಕ್ರಮ ನಡೆಯಿತು,ಮದ್ಯಾಹ್ನ ಮಹಾಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.ಸಾವಿರಾರು ಭಕ್ತರು ಗುರುರಾಯರ ದರ್ಶನ ಪಡೆದು ಪುನೀತರಾದರು.ಮದ್ಯಾಹ್ನ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸೂಲಿಯಣ್ಣ ಶೆಟ್ಟಿ,ಉಪಾಧ್ಯಕ್ಷ ಎಸ್.ರಾಜು ಪೂಜಾರಿ,ಕಾರ್ಯದರ್ಶಿ ಮಂಜುನಾಥ ಶೆಟ್ಟಿ ,ಸಮಿತಿಯ ಸರ್ವ ಸದಸ್ಯರು ಹಾಗೂ ಭಕ್ತಾಧಿಗಳು ಹಾಜರಿದ್ದರು.

ಸಂಜೆ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನೆ ಇದರ ಅತಿಥಿ ಕಲಾವಿದರ ಕೂಡುವಿಕೆಯಿಂದ ಶ್ರೀ ಕೃಷ್ಣ ಪಾರಿಜಾತ ಕಾರ್ತವೀರ್ಯ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
News/Pic: Giri Shiruru