ಶಿರೂರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆಲಂದೂರು ಹಾಗೂ ಮಾನಸ ಮಿತ್ರ ಮಂಡಳಿ ಆಲಂದೂರು ಇದರ ವತಿಯಿಂದ 2025 – 26 ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಅಭಿನಂದನಾ ಕಾರ್ಯಕ್ರಮ ಶಾಲೆಯ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ  ಪರೀಕ್ಷೆಯಲ್ಲಿ ಸಾಧನೆಗೈದ  ವಿದ್ಯಾರ್ಥಿಗಳನ್ನು ಗೌರವಿಸಲಾಯಿತು ಹಾಗೂ ನೂತನವಾಗಿ ಆಲಂದೂರು ಶಾಲೆಯಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳನ್ನು ನಡೆಸುವ ಕುರಿತು ಸಭೆ ನಡೆಯಿತು.

ಬೈಂದೂರು ರತ್ತುಬಾಯಿ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಪ್ರಕಾಶ್ ಮಾಕೋಡಿ,ವಸ್ರೆ -ಮೈಕಳ  ಶಾಲಾ ಮುಖ್ಯೋಪಾಧ್ಯಾಯ ಶ್ರೀಕಾಂತ್ ಕಾಮತ್, ಆಲಂದೂರು ಮಾನಸ ಮಿತ್ರ ಮಂಡಳಿ ಅಧ್ಯಕ್ಷ ಸುರೇಶ್ ಎಸ್.ಪೂಜಾರಿ,ಉಪಾಧ್ಯಕ್ಷ ಅಶ್ವಿನಿ ಕೊಠಾರಿ, ಶಾಲಾ ಮುಖ್ಯ ಶಿಕ್ಷಕಿ ವಿನ್ನಿ ಫನಾಂಡಿಸ್,ಆಲಂದೂರು ಮಂಜುನಾಥ್ ಗಾಣಿಗ,ಮಾನಸ ಮಿತ್ರ ಮಂಡಳಿಯ ಕಾರ್ಯದರ್ಶಿ ಕೃಷ್ಣ ಎಂ ಪೂಜಾರಿ,ಹಳೇ ವಿದ್ಯಾರ್ಥಿಗಳು ಹಾಗೂ ಮಾನಸ ಮಿತ್ರ ಮಂಡಳಿ ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

fifteen + 19 =