ಶಿರೂರು: ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ನೂತನ ತರಗತಿ ಕೊಠಡಿಯ ಉದ್ಘಾಟನೆ ಹಾಗೂ ಪೋಷಕರ ಸಭೆ ಶಾಲಾ ಸಭಾಭವನದಲ್ಲಿ ನಡೆಯಿತು.
ನೂತನ ತರಗತಿ ಕೊಠಡಿಯಯನ್ನು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಉದ್ಘಾಟಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರ್ಕಾರ ಶಿಕ್ಷಣಕ್ಕಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದೆ ಇದನ್ನು ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಬಳಸಿಕೊಂಡು ವಿದ್ಯಾಭ್ಯಾಸದಲ್ಲಿ ತೊಡಗಬೇಕು. ಸರಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವ ಮೂಲಕ ಶಾಲೆಗಳನ್ನು ಉಳಿಸುವ ಕೆಲಸ ಮಾಡಬೇಕು. ಕನ್ನಡ ಶಾಲೆಯ ಉಳಿವು ಹಾಗೂ ಬೆಳವಣಿಗೆಯ ಆತಂಕದ ಜೊತೆಗೆ ಸರಕಾರ ಕೂಡ ಹತ್ತು ಹಲವು ಯೋಜನೆಗಳ ಮೂಲಕ ಸರಕಾರಿ ಶಾಲೆಯ ಬೆಳವಣಿಗೆಗೆ ಪ್ರೋತ್ಸಾಹಿಸುತ್ತಿದೆ. ವಿದ್ಯಾಭ್ಯಾಸ ಪಡೆದು ಬದುಕು ರೂಪಿಸಿಕೊಂಡ ಬಳಿಕ ತಾನು ಕಲಿತ ಶಾಲೆ ಹಾಗೂ ಬೆಳೆದ ಊರಿನ ಅಭಿಮಾನ ಇದ್ದಾಗ ಪ್ರಗತಿ ಸಾಧ್ಯ .ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಹೆಚ್ಚಿನ ಒತ್ತು ನೀಡುವ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸುವುದಾಗಿ ತಿಳಿಸಿದರು.
ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಕೃಷ್ಣ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ತಾ.ಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ ಹೊಸ್ಮನೆ,ಶಿರೂರು ಗ್ರಾ.ಪಂ ಮಾಜಿ ಅಧ್ಯಕ್ಷೆ ನಾಗರತ್ನ ಆಚಾರ್ಯ,ಗ್ರಾ.ಪಂ ಮಾಜಿ ಸದಸ್ಯರಾದ ಪ್ರಸನ್ನ ಕುಮಾರ್ ಶೆಟ್ಟಿ, ಉಷಾ ಗಾಣಿಗ,ಶಾಲಾ ಎಸ್.ಡಿ.ಸಿ ಅಧ್ಯಕ್ಷ ಚಿಕ್ಕು ಪೂಜಾರಿ,ನಮ್ಮ ಕುಂದಾಪ್ರ ಕನ್ನಡ ಬಳಗದ ಸ್ಥಾಪಕಾಧ್ಯಕ್ಷ ಸಾಧನದಾಸ್ ಶಿರೂರು,ಸ.ಪ.ಪೂ ಕಾಲೇಜು ಶಿರೂರಿನ ಉಪಪ್ರಾಂಶುಪಾಲೆ ಜಯಂತಿ ಶೆಟ್ಟಿ,ಶಾಲಾ ಎಸ್.ಡಿ.ಎಮ್.ಸಿ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಟ್ಟಡ ನಿರ್ಮಾಣ ಮಾಡಿದ ಗುತ್ತಿಗೆದಾರರನ್ನು ಗೌರವಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕ ಶಂಕರ ಶಿರೂರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಶಿಕ್ಷಕ ಸಿ.ಎನ್.ಬಿಲ್ಲವ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕ ಗೋವಿಂದ ಎಂ.ವಂದಿಸಿದರು.
ವರದಿ/ಗಿರಿ ಶಿರೂರು
ಚಿತ್ರ: ಎ.ವನ್.ಸ್ಟುಡಿಯೋ ಶಿರೂರು