ಬೈಂದೂರು: ರೋಟರಿ ಕ್ಲಬ್ ಬೈಂದೂರು ಇದರ 2026-27 ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಇಂದು ಸಂಜೆ 7 ಗಂಟೆಗೆ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ನಡೆಯಲಿದೆ.

ರೋಟರಿ ಹಿಂದಿನ ಸಹಾಯಕ ಗವರ್ನರ್ ಉಮೇಶ ಪುತ್ರನ್ ನೂತನ ಅಧ್ಯಕ್ಷರಿಗೆ ಹಾಗೂ ಪದಾಧಿಕಾರಿಗಳಿಗೆ ಪದಪ್ರಧಾನ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ,ರೋಟರಿ ಸಹಾಯಕ ಗವರ್ನರ್ ಜೆ. ಶ್ರೀನಾಥ್ ರಾವ್,ವಲಯ ಲೆಪ್ಟಿನೆಂಟ್ ಚಂದ್ರಕಲಾ ತಾಂಡೆಲ್,ನಿಕಟಪೂರ್ವಾಧ್ಯಕ್ಷ ಸುಬ್ರಹ್ಮಣ್ಯ ಜಿ.ಉಪ್ಪುಂದ,ನಿಕಟಪೂರ್ವ ಕಾರ್ಯದರ್ಶಿ ಪ್ರದೀಪ ಶೆಟ್ಟಿ, ನೂತನ ಅಧ್ಯಕ್ಷರಾದ ಅರುಣ್ ಕುಮಾರ್ ಹಾಗೂ ನೂತನ ಕಾರ್ಯದರ್ಶಿ ಮಣಿಕಂಠ ಎಸ್ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

six − five =