ಬೈಂದೂರು: ಪ್ರತಿಷ್ಠಿತ ರೋಟರಿ ಕ್ಲಬ್ ಬಂದೂರು ಇದರ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಬೈಂದೂರು ರೋಟರಿ ಭವನದಲ್ಲಿ ನಡೆಯಿತು.
ನೂತನ ಅಧ್ಯಕ್ಚರಾದ ಅರುಣ್ ಕುಮಾರ್ ಶಿರೂರು ಅಧಿಕಾರ ಸ್ವೀಕರಿಸಿದರು.
ಪೂರ್ವ ಅಸಿಸ್ಟಂಟ್ ಗವರ್ನರ್, ಕುಂದಾಪುರ ಚಿನ್ಮಯಿ ಆಸ್ಪತ್ರೆ ಕುಂದಾಪುರ ಆಡಳಿತ ನಿರ್ದೇಶಕ ಡಾ.ಉಮೇಶ್ ಪುತ್ರನ್ ಪದಪ್ರಧಾನ ಕಾರ್ಯಕ್ರಮ ನೆರವೇರಿಸಿದರು.ಬಳಿಕ ಮಾತನಾಡಿದ ಅವರು ರೋಟರಿ ಸ್ವಸ್ಥ ಸಮಾಜ ನಿರ್ಮಾಣದ ದ್ಯೇಯ ಹೊಂದಿದ ಅಂತರಾಷ್ಟ್ರೀಯ ಸಂಸ್ಥೆಯಾಗಿದೆ.ಇದರ ಅಡಿಯಲ್ಲಿ ಜಗತ್ತಿನಾದ್ಯಂತ ಅತ್ಯುನ್ನತ ಸಾಮಾಜಿಕ ಚಟುವಟಿಕೆಯ ಆಂದೋಲನವೆ ರೂಪುಗೊಂಡಿದೆ.ಜಿಲ್ಲೆಯ ಪ್ರತಿಷ್ಠಿತ ಬೈಂದೂರು ಹಿರಿಯ ರೋಟರಿ ಸಂಸ್ಥೆಯಾಗಿದ್ದು ಅತ್ಯುತ್ತಮ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ಮಾತನಾಡಿ ಬೈಂದೂರು ವ್ಯಾಪ್ತಿಯಲ್ಲಿ ಕಳೆದ ನಾಲ್ಕು ದಶಕಗಳಿಂದ ಅನೇಕ ಹಿರಿಯರು ಕಟ್ಟಿ ಬೆಳೆಸಿದ ಈ ಸಂಸ್ಥೆ ಅತ್ಯುತ್ತಮ ಗುಣಮಟ್ಟದ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿದೆ.ಕಳೆದ ಹಲವು ವರ್ಷಗಳಿಂದ ವಿನೂತನ ಕಾರ್ಯಕ್ರಮದ ಚೈತನ್ಯ ದೊರೆತಿದ್ದು ಈ ವರ್ಷ ಇನ್ನಷ್ಟು ಉತ್ತಮ ಚಟುವಟಿಕೆ ಮೂಲಕ ಗುರುತಿಸಿಕೊಳ್ಳಲಿ ಎಂದರು.

ರೋಟರಿ ವಲಯ 1 ರ ಅಸಿಸ್ಟೆಂಟ್ ಗವರ್ನರ್ ಶ್ರೀನಾಥ ರಾವ್, ವಲಯ ಸೇನಾನಿ ಪ್ರಶಾಂತ ಹವಾಲ್ದಾರ್,ನಿಕಟಪೂರ್ವ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಉಪ್ಪುಂದ,ನಿಕಟಪೂರ್ವ ಕಾರ್ಯದರ್ಶಿ ಪ್ರದೀಪ ಕುಮಾರ್ ಶೆಟ್ಟಿ ಕಾರಿಕಟ್ಟೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಬಂದೂರು ಭಾಗದ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.ಆಶಕ್ತ ವಿದ್ಯಾರ್ಥಿಗಳಿಗೆ ನೆರವು ನೀಡಲಾಯಿತು ಹಾಗೂ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಗಾಲಿ ಕುರ್ಚಿ ಹಸ್ತಾಂತರಿಸಲಾಯಿತು.

ನಿವೃತ್ತ ಶಿಕ್ಷಕ ಆನಂದ ಮದ್ದೋಡಿ ಹಾಗೂ ಸುಧಾಕರ ಪಿ.ಬೈಂದೂರು ಕಾರ್ಯಕ್ರಮ ನಿರೂಪಿಸಿದರು.ನೂತನ ಕಾರ್ಯದರ್ಶಿ ಮಣಿಕಂಠ ದೇವಾಡಿಗ ವಂದಿಸಿದರು.
ವರದಿ/ಗಿರಿ ಶಿರೂರು
ಚಿತ್ರ: ಸುರೇಶ್ ಮಾಕೋಡಿ