ಬೈಂದೂರು: ಧ್ವನಿ ಬೆಳಕು ಸಂಯೋಜಕರ ಸಂಘಟನೆ(ರಿ.) ಉಡುಪಿ ಜಿಲ್ಲೆ ಬೈಂದೂರು ವಲಯ ಇದರ 15ನೇ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜು.21 ರಂದು ಮದ್ಯಾಹ್ನ 3 ಗಂಟೆಗೆ ಜೆ.ಎನ್.ಆರ್ ಕಲಾಮಂದಿರ ಯಡ್ತರೆಯಲ್ಲಿ ನಡೆಯಲಿದೆ.
ಖ.ರೈ.ಸೇ.ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ 15ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಬೈಂದೂರು ವಲಯ ಧ್ವನಿ ಬೆಳಕು ಸಂಯೋಜಕರ ಸಂಘದ ಅಧ್ಯಕ್ಷ ಗಣೇಶ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ.
ಜಾದೂಗಾರ ಓಂ ಗಣೇಶ ಉಪ್ಪುಂದ ಶುಭಸಂಸನೆಗೈಯಲಿದ್ದಾರೆ ಹಾಗೂ ಮುಂತಾದ ಗಣ್ಯರು ಉಪಸ್ಥಿತರಿರಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಯಕ್ಷ ರಾಘವ ಜನ್ಸಾಲೆ ರಾಘವೇಂದ್ರ ಆಚಾರ್ಯ ಬಳಗದವರಿಂದ ಗಾನ,ನಾಟ್ಯ ,ವೈಭವ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.