ಬೈಂದೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು,ಜಿಲ್ಲಾ ನ್ಯಾಯಾಂಗ ಉಡುಪಿ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಮತ್ತು ವಕೀಲರ ಸಂಘ (ರಿ.) ಬೈಂದೂರು ಇದರ ವತಿಯಿಂದ ಬೈಂದೂರು ತಾಲೂಕು ಕಾನೂನು ಸೇವೆಗಳ ಸಮಿತಿಯ ಉದ್ಘಾಟನಾ ಸಮಾರಂಭ ಜು.18 ರಂದು ಬೆಳಿಗ್ಗೆ 10:00 ಗಂಟೆಗೆ ಜೆ.ಎನ್.ಆರ್. ಕಲಾ ಮಂದಿರ ಯಡ್ತರೆಯಲ್ಲಿ ನಡೆಯಲಿದೆ.
ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಎಂ. ಐ. ಅರುಣ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ತಾಲೂಕು ಕಾನೂನು ಸೇವೆಗಳ ಸಮಿತಿ ಕುಂದಾಪುರ ಅಬ್ದುಲ್ ರಹೀಮ್ ಹುಸೇನ್ ಶೇಖ್ ಅಧ್ಯಕ್ಷತೆ ವಹಿಸಲಿದ್ದಾರೆ.
ಬೈಂದೂರು ವಕೀಲರ ಸಂಘದ ಅಧ್ಯಕ್ಷ ವಕೀಲ ಪ್ರಶಾಂತ್ ಪೂಜಾರಿ ಹಾಗೂ ಮುಂತಾದ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.