ಬೈಂದೂರು; ಧ್ವನಿ ಬೆಳಕು ಸಂಯೋಜಕರ ಸಂಘಟನೆ(ರಿ.) ಉಡುಪಿ ಜಿಲ್ಲೆ ಬೈಂದೂರು ವಲಯ ಇದರ 15ನೇ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಮಹಾಸಭೆ ಜೆ.ಎನ್.ಆರ್ ಕಲಾಮಂದಿರ ಯಡ್ತರೆಯಲ್ಲಿ ನಡೆಯಿತು.
ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಉಡುಪಿ ಜಿಲ್ಲೆ ಇದರ ಸಹಾಯಕ ನಿರ್ದೇಶಕಿ ಪೂರ್ಣಿಮಾ ಧ್ವನಿ ಬೆಳಕು ಸಂಯೋಜಕರ ಸಂಘಟನೆಯ 15ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಶುಭಹಾರೈಸಿದರು.
ಚಲನಚಿತ್ರ ನಟ ಹಾಗೂ ಜಾದೂಗಾರ ಓಂ ಗಣೇಶ ಉಪ್ಪುಂದ ಕಾರ್ಯಕ್ರಮಕ್ಕೆ ಶುಭಶಂಸನೆಗೈದು ಮಾತನಾಡಿದ ಅವರು ಸದಸ್ಯರ ಸಂಖ್ಯೆ ಹೆಚ್ಚಾದಂತೆ ಸಂಘಟನೆಯ ತಾಕತ್ತು ಬಲಗೊಳ್ಳುತ್ತದೆ.ಈ ಸಂಘಟನೆಯಲ್ಲಿ ಉದ್ಯಮದ ಮಾಲೀಕನೇ ನೌಕರನಾಗಿ ದುಡಿಯುತ್ತಿರುತ್ತಾನೆ. ಧ್ವನಿ ಮತ್ತು ಬೆಳಕು ಇಲ್ಲವಾದರೆ ಯಾವುದೇ ಸಮಾರಂಭದ ಕಾರ್ಯಗಳು ಯಶಸ್ವಿಯಾಗದು. ಈ ನಿಟ್ಟಿನಲ್ಲಿ ಸಂಘದ ಸದಸ್ಯರೆಲ್ಲರೂ ಪರಸ್ಪರ ಪೈಪೋಟಿಗಿಳಿಯದೇ ಧನಾತ್ಮಕ ಚಿಂತನೆಗಳ ಮೂಲಕ ಸೌಹಾರ್ದಯುತವಾಗಿ ಸಮಾಜಕ್ಕೂ ನ್ಯಾಯ ಸಿಗುವ ರೀತಿಯಲ್ಲಿ ವ್ಯವಹಾರ ಮಾಡುವಂತಾಗಬೇಕು. ಜೀವನೋಪಾಯಕ್ಕಾಗಿ ಮಾಡುವ ನಮ್ಮ ಉದ್ಯೋಗವನ್ನು ಮೊದಲು ನಾವು ಗೌರವಿಸಬೇಕು ಆಗ ನಮ್ಮನ್ನು ಸಮಾಜ ಗೌರವಿಸುತ್ತದೆ ಎಂದರು.
ಬೈಂದೂರು ವಲಯ ಧ್ವನಿ ಬೆಳಕು ಸಂಯೋಜಕರ ಸಂಘದ ಅಧ್ಯಕ್ಷ ಗಣೇಶ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ರಾಜ್ಯ ಶ್ಯಾಮಿಯಾನ ಡೆಕೋರೇಶನ್ ರಾಜ್ಯಾಧ್ಯಕ್ಷ ಅಬ್ದುಲ್ ಕರೀಂ ಅತ್ತಾರ್ ಬಾಗಲಕೋಟೆ,ಧ್ವನಿ ಬೆಳಕು ಸಂಘಟನೆಯ ಜಿಲ್ಲಾಧ್ಯಕ್ಷ ಸತೀಶ ಉಷಾ,ಬೈಂದೂರು ವಲಯ ಧ್ವನಿ ಬೆಳಕು ಸಂಯೋಜಕರ ಗೌರವಾಧ್ಯಕ್ಷ ಶಶಿಧರ ಶೆಣೈ,ಮಣಕನ ನಾರಾಯಣ ಖಾರ್ವಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಲಾವಣ್ಯ ಸಂಸ್ಥೆಯ ಹಿರಿಯ ರಂಗಕರ್ಮಿ ಬಿ.ಗಣೇಶ ಕಾರಂತ್ ರವರನ್ನು ಸಮ್ಮಾನಿಸಲಾಯಿತು.
ದಶಮಾನೋತ್ಸವ ಸಮಿತಿ ಅಧ್ಯಕ್ಷ ಶಿವರಾಜ ಮಲ್ಲ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ನಿಕಟಪೂರ್ವಾಧ್ಯಕ್ಷ ಉದಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಯಕ್ಷ ರಾಘವ ಜನ್ಸಾಲೆ ರಾಘವೇಂದ್ರ ಆಚಾರ್ಯ ಬಳಗದವರಿಂದ ಗಾನ,ನಾಟ್ಯ ,ವೈಭವ ಕಾರ್ಯಕ್ರಮ ನಡೆಯಿತು.
ವರದಿ/ಚಿತ್ರ/ ಗಿರಿ ಶಿರೂರು