ಶಿರೂರು: ಉಡುಪಿ ಜಿಲ್ಲಾಡಳಿತದ ಸಹಯೋಗದೊಂದಿಗೆ ಹಾಗೂ ಜೆಸಿಐ ಶಿರೂರು ಘಟಕ ಇದರ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರು ಇದರ ಫ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಕಾರ್ಯಕ್ರಮ ನಡೆಯಿತು.

ಶಿರೂರು ಜೆಸಿಐ ಅಧ್ಯಕ್ಷ ವಿನೋದ ಮೇಸ್ತ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ಪ್ರಾಂಶುಪಾಲ ದೇವೆಂದ್ರ ಕೆ.ಮೊಗೇರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಜೆಸಿಐ ಕಾರ್ಯದರ್ಶಿ ಪವನ್ ಪೂಜಾರಿ,ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಲೇಜಿನ ಉಪಪ್ರಾಂಶುಪಾಲೆ ಜಯಂತಿ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನೋಡಲ್ ಅಧಿಕಾರಿ ಶ್ರೀದೇವಿ ಕಾರ್ಯಕ್ರಮ ನಿರೂಪಿಸಿದರು.ಆರತಿ ವಂದಿಸಿದರು.

Leave a Reply

Your email address will not be published. Required fields are marked *

18 + 8 =