ಬೈಂದೂರು: ರೋಟರಿ ಕ್ಲಬ್ ಬೈಂದೂರು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ)ಉಡುಪಿ,ಸಮುದಾಯ ಆರೋಗ್ಯ ಕೇಂದ್ರ ಬೈಂದೂರು,ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇದರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಶಿಬಿರ ಹಾಗೂ ಪೊರೆ ತಪಾಸಣೆ ಶಿಬಿರ ಸಮುದಾಯ ಆರೋಗ್ಯ ಕೇಂದ್ರ ಬೈಂದೂರಿನಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಅರುಣ್ ಕುಮಾರ್ ಶಿರೂರು,ಕಾರ್ಯದರ್ಶಿ ಮಣಿಕಂಠ ದೇವಾಡಿಗ,ಸದಸ್ಯರಾದ ನಾರಾಯಣ ದೇವಾಡಿಗ,ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಹಾಜರಿದ್ದರು.