ಬೈಂದೂರು; ರೋಟರಿ ಕ್ಲಬ್ ಬೈಂದೂರು,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ) ಉಡುಪಿ,ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರುನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಶಿಬಿರ ಹಾಗೂ ಹೊರೆ ತಪಾಸಣೆ ಶಿಬಿರ ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರಿನಲ್ಲಿ ನಡೆಯಿತು.

ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಡಾನ್ಸರ್ ಕಾರ್ಯಕ್ರಮ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ  ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಅರುಣ್ ಕುಮಾರ್ ಶಿರೂರು,ಪೂರ್ವಾಧ್ಯಕ್ಷ ಪ್ರಸಾದ ಪ್ರಭು,ಕಾರ್ಯದರ್ಶಿ ಮಣಿಕಂಠ ಎಸ್.ದೇವಾಡಿಗ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿಯ ವೈದ್ಯಾಧಿಕಾರಿಗಳು ಹಾಗೂ ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಜರಿದ್ದರು.

ಆರೋಗ್ಯ ಇಲಾಖೆಯ ಸಿಬ್ಬಂದಿ ನಾಗರಾಜ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

four + fifteen =