ಶಿರೂರು: ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರಿನಲ್ಲಿ ಕಳೆದ ಹಲವು ವರ್ಷಗಳಿಂದ ಹಾಸ್ಪಿಟಲ್ ಅಟೆಂಡೆಂಟ್ ಆಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಬಿ.ಕೆ ಯಶೋಧ ಇವರ ಬೀಳ್ಕೋಡುಗೆ ಸಮಾರಂಭ ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರಿನ ಸಭಾಂಗಣದಲ್ಲಿ ನಡೆಯಿತು.

ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ ಕೆ.ಬೀಳ್ಕೋಡುಗೆ ಸಮಾರಂಭವನ್ನುದ್ದೇಶಿಸಿ ಮಾತನಾಡಿ ನೀವು ಮಾಡಿದ ಸೇವೆ,ಸ್ನೇಹ ಮತ್ತು ಮಾರ್ಗದರ್ಶನ ಸದಾ ಸ್ಮರಣೀಯವಾಗಿದೆ.ನಿಮ್ಮ ಮುಂದಿನ ಜೀವನ ಸುಖ,ಶಾಂತಿ ಮತ್ತು ಯಶಸ್ಸಿನಿಂದ ಕೂಡಿರಲಿ ಹಾಗೂ ಮುಂದಿನ ನಿಮ್ಮ ಭವಿಷ್ಯ ಉಜ್ವಲವಾಗಲಿ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಅವರನ್ನು ಆರೋಗ್ಯ ಇಲಾಖೆಯ ಸಿಬ್ಬಂದಿಗಳ ವತಿಯಿಂದ ಗೌರವಿಸಲಾಯಿತು.

ನಿವೃತ್ತ ಆರೋಗ್ಯ ಇಲಾಖೆಯ ನಾಗಪ್ಪ ಗಾಣಿಗ,ಮಂಜುನಾಥ ದೇವಾಡಿಗ,ಭವಾನಿ,ವಿನೋದ,ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಹಾಜರಿದ್ದರು.

ಆರೋಗ್ಯ ಇಲಾಖೆಯ ಸಿಬ್ಬಂದಿ ನಾಗರಾಜ ಎನ್.ಪೂಜಾರಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಸಿಬ್ಬಂದಿ ಜೊಯ್ಲಿನ್ ವಂದಿಸಿದರು.

Leave a Reply

Your email address will not be published. Required fields are marked *

18 + 3 =