ಬೈಂದೂರು: ಪಟ್ಟಣ ಪಂಚಾಯತ್‌ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ರೈತ ಸಂಘದ ಅಧ್ಯಕ್ಷ ದೀಪಕ್‌ ಕುಮಾರ್‌ ಶೆಟ್ಟಿ ನೇತ್ರತ್ವದಲ್ಲಿ ನಡೆಯುತ್ತಿರುವ ಧರಣಿ ಒಂದು ವರ್ಷ ಪೂರೈಸಿದೆ.ನಿರಂತರ ಸರಕಾರದ ಮಟ್ಟದಲ್ಲಿ ಪ್ರಯತ್ನಗಳು ನಡೆದು ಜಿಲ್ಲಾಧಿಕಾರಿಗಳು ವರದಿ ನೀಡಿದ್ದರು ಕೂಡ ರೈತರಿಗೆ ನ್ಯಾಯ ದೊರೆತಿಲ್ಲ್ಲ. ಹೀಗಾಗಿ ಅ.7 ಹಾಗೂ 8 ರಂದು ಅಹೋರಾತ್ರಿ ಧರಣಿ ನಡೆಯಲಿದೆ ಮತ್ತು ನೂರಾರು ರೈತರು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.ಸರಕಾರದಿಂದ ಸ್ವ-ನಿರ್ದೇಶನ ಬರುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದರು.

Leave a Reply

Your email address will not be published. Required fields are marked *

sixteen + fourteen =