ಶಿರೂರು: ಆರ್‍ಮಕ್ಕಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಶಿರೂರು ಇದರ 2025 – 26ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಗುರುವಾರ ಸಂಘದ ವಠಾರದಲ್ಲಿ ನಡೆಯಿತು.ದ.ಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ವಾಸುದೇವ ಪುರಾಣಿಕ ಮಾತನಾಡಿ ಹಾಲು ಉತ್ಪಾದಕರು ನಮ್ಮ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿದ್ದಾರೆ.ರೈತರ ಪರಿಶ್ರಮದಿಂದಲೇ ಹೈನುಗಾರಿಕೆ ಕ್ಷೇತ್ರವು ಅಭಿವೃದ್ಧಿಯಾಗುತ್ತಿದೆ.ಸಂಘದ ಅಭಿವೃದ್ಧಿಯೊಂದಿಗೆ ಪ್ರತಿಯೊಬ್ಬ ಹಾಲು ಉತ್ಪಾದಕರ ಹಿತ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ ಹಾಗೂ ಲಾಭದಾಯಕ ಹೈನುಗಾರಿಕೆ ನಡೆಸುವ ಬಗ್ಗೆ ಮಾಹಿತಿ ನೀಡಿದರು.
ಸಂಘದ ಅಧ್ಯಕ್ಷೆ ಶಶಿಕಲಾ ಜೆ.ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘವು ಒಟ್ಟು 62,24,707.45 ವ್ಯವಹಾರ ನಡೆಸಿದ್ದು 379950,22 ನಿವ್ವಳ ಲಾಭ ಗಳಿಸಿದ್ದು ಸಂಘದ ಸದಸ್ಯರಿಗೆ ಶೇ.15% ಡಿವಿಡೆಂಡ್ ಹಾಗೂ 65% ಬೋನಸ್ ನೀಡಲಾಯಿತು.
ಉಪಾಧ್ಯಕ್ಷೆ ಶೋಭಾ ಶೆಡ್ತಿ ಹಾಗೂ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಲತಾ ಶೆಟ್ಟಿ ಸಂಘದ ವಾರ್ಷಿಕ ವರದಿ ಮಂಡಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.