ಬೈಂದೂರು;ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು ರೈಲ್ವೇ ನಿಲ್ದಾಣದ ಸಮಗ್ರ ಅಭಿವೃದ್ಧಿ ಹಾಗೂ ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಿಯ ಭಕ್ತರ ಅನುಕೂಲಕ್ಕಾಗಿ ಕೈಗೊಂಡಿರುವ ಪ್ರಮುಖ ಕಾರ್ಯಗಳು ಕುರಿತು ಸೋಮವಾರ ಸಂಸದ ಶ್ರೀ ಬಿ.ವೈ.ರಾಘವೇಂದ್ರ ಅವರು ಭೇಟಿ ನೀಡಿದರು.

ರೈಲ್ವೇ ನಿಲ್ದಾಣದ ಮೇಲ್ದರ್ಜೆ: ಈ ಹಿಂದೆ ಕೇವಲ ಹಾಲ್ಟ್ ಸ್ಟೇಷನ್ ಆಗಿದ್ದ ಬೈಂದೂರು ರೈಲ್ವೇ ನಿಲ್ದಾಣವನ್ನು 2.64 ಕೋಟಿ ವೆಚ್ಚದಲ್ಲಿ ನೂತನ ನಿಲ್ದಾಣ, ಗಣಕೀಕೃತ ಟಿಕೆಟ್ ಕಾದಿರಿಸುವಿಕೆ (PRS) ಮತ್ತು ಪ್ಲಾಟ್‌ಫಾರ್ಮ್ ವಿಸ್ತರಣೆಯೊಂದಿಗೆ ಮೇಲ್ದರ್ಜೆಗೇರಿಸಲಾಗಿದೆ. 50ಕ್ಕೂ ಹೆಚ್ಚು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ: ಒಂದೂ ಎಕ್ಸ್‌ಪ್ರೆಸ್ ರೈಲು ನಿಲ್ಲದ ನಿಲ್ದಾಣದಲ್ಲಿ ಇಂದು 50ಕ್ಕೂ ಹೆಚ್ಚು ಎಕ್ಸ್‌ಪ್ರೆಸ್ ರೈಲುಗಳು ನಿಲುಗಡೆಯಾಗುತ್ತಿದ್ದು, ನೂರಾರು ಟ್ಯಾಕ್ಸಿ ಹಾಗೂ ಆಟೋ ಚಾಲಕರಿಗೆ ಉದ್ಯೋಗಾವಕಾಶ ದೊರೆತಿದೆ.

 ಕೊಲ್ಲೂರು ಕ್ಷೇತ್ರದ ಅಧಿಕೃತ ರೈಲು ನಿಲ್ದಾಣ: ಕೊಲ್ಲೂರು ದೇವಸ್ಥಾನದಿಂದ ಕೇವಲ 27 ಕಿ.ಮೀ. ದೂರದಲ್ಲಿರುವ ಈ ನಿಲ್ದಾಣಕ್ಕೆ ರಾ.ಹೆ-766ಸಿ ಮೂಲಕ ನೇರ ರಸ್ತೆ ಸಂಪರ್ಕವಿದೆ. ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಹಾಗೂ ಗೋವಾದಿಂದ ಬರುವ ಭಕ್ತರ ಹಿತದೃಷ್ಟಿಯಿಂದ ಇದನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರದ ಅಧಿಕೃತ ರೈಲು ನಿಲ್ದಾಣವಾಗಿ ಗುರುತಿಸಲು ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣನವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ.

86 ಕೋಟಿ ವೆಚ್ಚದ ಸಮಗ್ರ ಪ್ರಸ್ತಾವನೆ: ಉಡುಪಿ ಜಿಲ್ಲಾ ಕೇಂದ್ರದ ನಂತರ ಅತಿ ಹೆಚ್ಚು ಆದಾಯ ತರುವ ನಿಲ್ದಾಣವಾದ ಬೈಂದೂರನ್ನು ‘Fully Fledged’ ನಿಲ್ದಾಣವನ್ನಾಗಿ ರೂಪಿಸಲು ₹86.00 ಕೋಟಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ.

 ಹೆಚ್ಚುವರಿ ನಿಲುಗಡೆಗಳು: ಮುಂಬರುವ ದಿನಗಳಲ್ಲಿ ಎಲ್ಲಾ ರಾಜ್ಯದ ಪ್ರಮುಖ ರೈಲುಗಳ ನಿಲುಗಡೆಗೆ ಪ್ರಯತ್ನ ಮುಂದುವರಿದಿದ್ದು, ಬಿಜೂರು ಹಾಗೂ ಸೇನಾಪುರ ರೈಲು ನಿಲ್ದಾಣಗಳಲ್ಲೂ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗೆ ಮನವಿ ಮಾಡಲಾಗಿದೆ.

 ಪ್ರವಾಸೋದ್ಯಮಕ್ಕೆ ಉತ್ತೇಜನ: ಈ ಸಂಪರ್ಕ ವಿಸ್ತರಣೆಯಿಂದ ಮರವಂತೆ ಕಡಲತೀರ ಹಾಗೂ ಒತ್ತಿನೆಣೆ ಸೂರ್ಯಾಸ್ತ ತಾಣ ಸೇರಿದಂತೆ ಕರಾವಳಿ ಭಾಗದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಗಲಿದೆ ಎಂದರು.

ಈ ಸಂದರ್ಭದಲ್ಲಿ ಬೈಂದೂರುವ ಶಾಸಕ ಗುರುರಾಜ ಗಂಟಿಹೊಳೆ,ಉದ್ಯಮಿ ವೆಂಕಟೇಶ ಕಿಣಿ,ಜಯಾನಂದ ಹೋಬಳಿದಾರ್,ಮಾಜಿ ಜಿ.ಪಂ ಸದಸ್ಯ ಸುರೇಶ ಬಟ್ವಾಡಿ,ಪ್ರಿಯದರ್ಶಿನಿ ದೇವಾಡಿಗ,ಮಂಡಲದ ಪ್ರಧಾನ ಕಾರ್ಯದರ್ಶಿ ಗೋಪಾಲ ವಸ್ರೆ ಹಾಗೂ ರೈಲ್ಚೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

6 + 15 =