ಬೈಂದೂರು: ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಯಡ್ತರೆ ಇದರ 2025-26ನೇ ಸಾಲಿನ ಉತ್ತಮ ಸಾಧನೆಗೆ ಜಿಲ್ಲಾ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ. ಆ.22ರಂದು ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2025-26ನೇ ಸಾಲಿನ 112ನೇ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ನಾರಾಯಣ ಹೆಗ್ಡೆ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರತಾಪಚಂದ್ರ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಉಪಾಧ್ಯಕ್ಷರು, ನಿರ್ದೇಶಕರು ಉಪಸ್ಥಿತರಿದ್ದರು.