ಬೈಂದೂರು,28: ತಾಲೂಕು ಆಡಳಿತ ಸೌಧ ಬೈಂದೂರಿನಲ್ಲಿ 172ನೇ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಆಚರಿಸಲಾಯಿತು.

ಬೈಂದೂರು ಸ.ಪ್ರ.ದ.ಕಾಲೇಜಿನ ಪ್ರಾಂಶುಪಾಲ ರಾಘವೇಂದ್ರ ಗುಡಿಗಾರ್ ಮಾತನಾಡಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭೋಧನೆಗಳು ಹಾಗೂ ತತ್ವಾದರ್ಶಗಳು ಇಡೀ ಮಾನವ ಕುಲಕ್ಕೆ ಮಾರ್ಗದರ್ಶಿಯಾಗಿದೆ. ಸಾಮಾಜಿಕ ಮತ್ತು ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಒತ್ತು ನೀಡುವುದರ ಮೂಲಕ ದಲಿತರು, ಹಿಂದುಳಿದ ವರ್ಗಗಳ ಸಮುದಾಯವನ್ನು ಉನ್ನತಮಟ್ಟಕ್ಕೆ ಏರಿಸಿದ ಮಹಾನ್ ವ್ಯಕ್ತಿಯಾಗಿದ್ದಾರೆ.ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳು ಇಂದಿಗೂ ಅಮರ ಎಂದರು.

ಶಾಸಕ ಗುರುರಾಜ ಗಂಟಿಹೊಳೆ,ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಪಟ್ಟಣ ಪಂಚಾಯತ್ ಅಭಿವೃದ್ದಿ ಅಧಿಕಾರಿ ಅಜಯ್ ಭಂಡಾರ್ಕರ್, ತಹಶೀಲ್ದಾರ ರವಿರಾಜ್ ದೀಕ್ಷಿತ್ , ಗ್ರೇಡ್ 2 ತಹಶೀಲ್ದಾರ ರಾಮಚಂದ್ರಪ್ಪ,ಬೈಂದೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ ಪೂಜಾರಿ,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶೇಖರ ಪೂಜಾರಿ,ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್‌.ರಾಜು ಪೂಜಾರಿ,ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್,ತಾಲೂಕು ಬಿಲ್ಲವ ಸಂಘದ ಕಾರ್ಯದರ್ಶಿ ವಾಸುದೇವ ಪೂಜಾರಿ,ಶಿವರಾಜ ಪೂಜಾರಿ,ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ್ ಪೂಜಾರಿ,ಬೈಂದೂರು-ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ,ತಹಶೀಲ್ದಾರ್ ಕಛೇರಿಯ ಸಿಬ್ಬಂದಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಗಣಪತಿ ಹೋಬಳಿದಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು ಹಾಗೂ ವಿದ್ಯಾರ್ಥಿಗಳಿಗೆ ನಾರಾಯಣ ಗುರು ಜಯಂತಿ ಪ್ರಯುಕ್ತ ನಡೆಸಿದ ಸ್ಪರ್ಧೆಗಳ ಬಹುಮಾನ ನೀಡಲಾಯಿತು.

Leave a Reply

Your email address will not be published. Required fields are marked *

fifteen + two =